ADVERTISEMENT

ವರ್ಗಾವಣೆ ದಂಧೆಗೆ ಕಡಿವಾಣ ಹಾಕಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2024, 14:26 IST
Last Updated 5 ಆಗಸ್ಟ್ 2024, 14:26 IST
ಶಾಸಕ ಎಂ.ಟಿ.ಕೃಷ್ಣಪ್ಪ
ಶಾಸಕ ಎಂ.ಟಿ.ಕೃಷ್ಣಪ್ಪ   

ತುರುವೇಕೆರೆ: ಜೂನ್–ಜುಲೈ ತಿಂಗಳಲ್ಲಿ ರಾಜ್ಯದ ಯಾವುದೇ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯಿಸಿದರು.

ಸೋಮವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಖಾಲಿ ಇರುವ ಹುದ್ದೆಗಳಿಗೆ ಅಗತ್ಯ ಇದ್ದಲ್ಲಿ ಮಾತ್ರ ವರ್ಗಾವಣೆ ಪ್ರಕ್ರಿಯೆ ಮಾಡಬೇಕು. ಇಲ್ಲವಾದರೆ ನೇರವಾಗಿ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ವಲಯಗಳಿಗೆ ಹೆಚ್ಚಿನ ತೊಂದರೆಯಾಗಲಿದೆ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು, ಜನರ ಸೇವೆ ಹಾಗೂ ಅಭಿವೃದ್ಧಿ ಮಾಡುವುದನ್ನು ಬಿಟ್ಟು ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ADVERTISEMENT

ವಿಧಾನಸೌಧದ ತುಂಬಾ ವರ್ಗಾವಣೆ ದಂಧೆ ಕೋರರು ತುಂಬಿದ್ದಾರೆ. ಸರ್ಕಾರ ವರ್ಗಾವಣೆ ದಂಧೆಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಟಿಯಲ್ಲಿ ಜೆಡಿಎಸ್ ವಕ್ತಾರ ವೆಂಕಟಾಪುರ ಯೋಗೀಶ್, ಮಾದಿಹಳ್ಳಿ ಕಾಂತರಾಜು, ಮಂಗಿಕುಪ್ಪೆ ಬಸವರಾಜು, ನೌಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶಿಕ್ಷಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.