ತುಮಕೂರು: ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನ, ಬಾಂಗ್ಲಾದೇಶದ ಪ್ರಜೆಗಳನ್ನು ಪತ್ತೆ ಹಚ್ಚಿ, ಅವರ ದೇಶಕ್ಕೆ ಕಳುಹಿಸುವಂತೆ ಮಾಜಿ ಸಚಿವ ಸೊಗಡು ಶಿವಣ್ಣ ಇಲ್ಲಿ ಮಂಗಳವಾರ ಆಗ್ರಹಿಸಿದರು.
‘ಪಹಲ್ಗಾಮ್ ದಾಳಿ ನಂತರ ದೇಶದಲ್ಲಿರುವ ಪಾಕಿಸ್ತಾನದ ಪ್ರಜೆಗಳನ್ನು ಗುರುತಿಸಿ, ಇಲ್ಲಿಂದ ವಾಪಸ್ ಕಳುಹಿಸಲು ಕೇಂದ್ರ ಸರ್ಕಾರ ಸೂಚಿಸಿದೆ. ಇದರ ಜತೆಗೆ ಬಾಂಗ್ಲಾದೇಶದ ಪ್ರಜೆಗಳನ್ನು ಸಹ ದೇಶದಿಂದ ಹೊರದಬ್ಬಬೇಕು. ಭಯೋತ್ಪಾದಕರು, ಮಾದಕ ಪದಾರ್ಥ ಮಾರಾಟ ಜಾಲದಲ್ಲಿ ಭಾಗಿಯಾಗಿರುವ, ಸಮಾಜ ದ್ರೋಹಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಬೇಕು’ ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಭಾರತದ ಮುಸ್ಲಿಮರು ಈ ಮಣ್ಣಿನಲ್ಲಿ ಹುಟ್ಟಿದವರು. ಇವರಲ್ಲಿ ದೇಶಾಭಿಮಾನ, ಭಾವೈಕ್ಯತೆಯ ಗುಣ ಇದೆ. ಆದರೆ ಭಯೋತ್ಪಾದನೆ ಮೂಲಕ ದೇಶದಲ್ಲಿ ಒಡಕು ಉಂಟು ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಈ ವಿಚಾರದಲ್ಲಿ ಮುಸ್ಲಿಮರು ಎಚ್ಚರಿಕೆಯಿಂದ ಇರಬೇಕು ಎಂದರು.
ಮುಖಂಡರಾದ ಕೆ.ಪಿ.ಮಹೇಶ್, ಕೆ.ಹರೀಶ್, ಇಮ್ರಾನ್ ರಾಜ್, ಮಹ್ಮದ್ ಇಸ್ಮಾಯಿಲ್, ಅತಿಕ್, ಸೈಯದ್ ನದೀಮ್ ಉಲ್ಲಾ, ವಾಸೀಂಖಾನ್, ನಟರಾಜ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.