ADVERTISEMENT

ಗೆಲುವಿಗೆ ವರವಾದ ದೇವೇಗೌಡ: ಜಿ.ಎಸ್.ಬಸವರಾಜ್

​ಪ್ರಜಾವಾಣಿ ವಾರ್ತೆ
Published 25 ಮೇ 2019, 13:42 IST
Last Updated 25 ಮೇ 2019, 13:42 IST
ಜಿ.ಎಸ್.ಬಸವರಾಜ್
ಜಿ.ಎಸ್.ಬಸವರಾಜ್   

ತುಮಕೂರು: ‘ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಎಸ್.ಪಿ.ಮುದ್ದಹನುಮೇಗೌಡ ಅವರು ಸ್ಪರ್ಧಿಸಿದ್ದರೆ ನನ್ನ ಗೆಲುವು ಕಷ್ಟವಾಗುತ್ತಿತ್ತು. ಎಚ್.ಡಿ.ದೇವೇಗೌಡರು ಬಂದಿದ್ದು ವರವಾಯಿತು’ ಎಂದು ಬಿಜೆಪಿ ವಿಜೇತ ಅಭ್ಯರ್ಥಿ ಜಿ.ಎಸ್.ಬಸವರಾಜ್ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ನನ್ನ ಒಳ್ಳೆಯ ಸ್ನೇಹಿತರು. ಆದರೆ ಅವರು ನನಗೆ ಸಹಾಯ ಮಾಡಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲ ಪಕ್ಷದವರೂ ನನಗೆ ಮತ ಹಾಕಿದ್ದಾರೆ. ಆದಕಾರಣ ನಾನು ಗೆದ್ದಿದ್ದೇನೆ’ ಎಂದರು.

’ಎಚ್.ಡಿ.ದೇವೇಗೌಡರ ಕುಟುಂಬ ಎಂದೂ ಸತ್ಯವನ್ನು ಹೇಳುವುದಿಲ್ಲ. 2014ರ ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರು ಮೋದಿ ಪ್ರಧಾನಿ ಆದರೆ ದೇಶ ಬಿಡುತ್ತೇನೆ ಎಂದಿದ್ದರು. ಈ ಬಾರಿ ಎಚ್.ಡಿ.ರೇವಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದಿದ್ದರು. ಈಗ ಪ್ರಜ್ವಲ್ ರೇವಣ್ಣ ರಾಜೀನಾಮೆ ನಾಟಕ ಆಡುತ್ತಿದ್ದಾರೆ’ ಎಂದು ಲೇವಡಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.