ವರ್ಗಾವಣೆ
ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಎನ್.ಮಂಜುನಾಥ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸ್ಥಾನಕ್ಕೆ ಜಿಲ್ಲಾ ಮಲೇರಿಯಾ ಅಧಿಕಾರಿಯಾಗಿದ್ದ ಡಾ.ಬಿ.ಎಂ.ಚಂದ್ರಶೇಖರ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ನಕಲಿ ವೈದ್ಯರ ಹಾವಳಿ ನಿಯಂತ್ರಿಸದಿರುವುದು, ಮದ್ಯ ಸೇವಿಸಿ ಕೆಲಸಕ್ಕೆ ಹಾಜರಾಗುವ ವೈದ್ಯರ ಬಗ್ಗೆ ದೂರುಗಳು ಬಂದಿದ್ದರೂ ಕ್ರಮ ಕೈಗೊಳ್ಳದಿರುವುದು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಲಭ್ಯತೆ ಸೇರಿದಂತೆ ಅವ್ಯವಸ್ಥೆ ಸರಿಪಡಿಸದಿರುವುದು, ತಾಲ್ಲೂಕು ಆಸ್ಪತ್ರೆಗಳನ್ನು ಸುಸ್ಥಿತಿಗೆ ತರದಿರುವುದು, ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗದಿರುವುದು ಹಾಗೂ ಇತರೆ ಆರೋಪಗಳನ್ನು ಎದುರಿಸುತ್ತಿದ್ದರು.
ಕೊರಟಗೆರೆ ಆಸ್ಪತ್ರೆ ವೈದ್ಯ ಆರ್.ವಿ.ಮೋಹನ್‌ದಾಸ್ ಅವರನ್ನು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.