ADVERTISEMENT

ಅಗ್ನಿಶಾಮಕ ಠಾಣೆಗೆ ಭೇಟಿ ನೀಡಿದ ಡಿಐಜಿ

​ಪ್ರಜಾವಾಣಿ ವಾರ್ತೆ
Published 5 ಜನವರಿ 2021, 7:52 IST
Last Updated 5 ಜನವರಿ 2021, 7:52 IST
ಅಗ್ನಿಶಾಮಕ ಇಲಾಖೆಯ ಕಚೇರಿಗೆ ಭೇಟಿ ನೀಡಿದ ಡಿಐಜಿ ಅಮರ್‌ಕುಮಾರ್ ಪಾಂಡೆ, ಸುರಕ್ಷತಾ ಸಾಮಗ್ರಿಗಳನ್ನು ವೀಕ್ಷಿಸಿದರು.
ಅಗ್ನಿಶಾಮಕ ಇಲಾಖೆಯ ಕಚೇರಿಗೆ ಭೇಟಿ ನೀಡಿದ ಡಿಐಜಿ ಅಮರ್‌ಕುಮಾರ್ ಪಾಂಡೆ, ಸುರಕ್ಷತಾ ಸಾಮಗ್ರಿಗಳನ್ನು ವೀಕ್ಷಿಸಿದರು.   

ಮಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್‌ ಮಹಾನಿರ್ದೇಶಕ ಅಮರ್ ಕುಮಾರ್ ಪಾಂಡೆ, ನಗರದ ಪಾಂಡೇಶ್ವರ ಅಗ್ನಿಶಾಮಕ ಠಾಣೆಗೆ ಭೇಟಿ ನೀಡಿದರು.

ವಾಹನಗಳು, ರಕ್ಷಣಾ ಉಪಕರಣಗಳ ಕಾರ್ಯವೈಖರಿ ಪರಿಶೀಲಿಸಿದ್ದು, ಮಂಗಳೂರು ನಗರ ಹಾಗೂ ಮುಖ್ಯ ಅಗ್ನಿಶಾಮಕ ಕಚೇರಿಯಲ್ಲಿ ಸಂಭವಿಸುವಂತಹ ಅಗ್ನಿ ಅನಾಹುತ, ರಕ್ಷಣಾ ಕರೆ, ನೆರೆ ಹಾವಳಿ, ಇನ್ನಿತರ ಅವಘಡಗಳ ಬಗ್ಗೆ ಚರ್ಚಿಸಿದರು.

ಮುಖ್ಯ ಅಗ್ನಿಶಾಮಕ ಅಧಿಕಾರಿ ಜಿ.ತಿಪ್ಪೇಸ್ವಾಮಿ, ಲಭ್ಯವಿರುವ ಅಗ್ನಿಶಾಮಕ ವಾಹನಗಳು ಮತ್ತು ರಕ್ಷಣಾ ಉಪಕರಣಗಳ ಬಗ್ಗೆ ವಿವರಿಸಿದರು. ನಗರ ಪೊಲೀಸ್ ಕಮಿಷನರ್‌ ಎನ್.ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀ ಪ್ರಸಾದ್, ಡಿಸಿಪಿ ಹರಿರಾಂ ಶಂಕರ್, ಜಿಲ್ಲಾ ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಟ ಡಾ. ಮುರಳಿ ಮೋಹನ ಚೂಂತಾರು, ಅಗ್ನಿಶಾಮಕ ಅಧಿಕಾರಿಗಳು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.