ತುಮಕೂರು: ವಿಧಾನ ಪರಿಷತ್‌ಗೆ ಆಯ್ಕೆ ಮಾಡಿರುವ ನಾಲ್ವರು ಸದಸ್ಯರ ಪಟ್ಟಿಗೆ ಪಕ್ಷದ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಈ ಬಗ್ಗೆ ಹೈಕಮಾಂಡ್ ಚರ್ಚಿಸಿ ಸಮಸ್ಯೆ ಬಗೆಹರಿಸಲಿದೆ’ ಎಂದರು.
‘ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಹಿತಿ ಇಲ್ಲ. ನನಗೆ ವಹಿಸಿದ ಕೆಲಸವನ್ನು ನಾನು ಮಾಡುತ್ತಿದ್ದೇನೆ. ಇಂತಹ ವಿಚಾರಗಳನ್ನು ಹೈಕಮಾಂಡ್ ನೋಡಿಕೊಳ್ಳಲಿದೆ’ ಎಂದರು.
‘ಮಾಜಿ ಸಚಿವ ಬಿಜೆಪಿಯ ಜೆ.ಸಿ.ಮಾಧುಸ್ವಾಮಿ ಕಾಂಗ್ರೆಸ್ ಸೇರುವ ಬಗ್ಗೆ ತಮಗೇನೂ ಗೊತ್ತಿಲ್ಲ. ಈ ವಿಚಾರವನ್ನು ನನ್ನ ಬಳಿ ಚರ್ಚಿಸಿಲ್ಲ. ಅವರನ್ನು ಭೇಟಿಯಾಗಿ ಸಾಕಷ್ಟು ದಿನಗಳಾಯಿತು’ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.