ಕುಣಿಗಲ್ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ದೀಪ ಸಂಜೀವಿನಿ ಕಾರ್ಯಕ್ರಮದ ಮೂಲಕ ದೀಪಗಳ ಪ್ರದರ್ಶನ, ಮಾರಾಟ ವ್ಯವಸ್ಥೆ ಮಾಡಲಾಗಿದೆ
ಕುಣಿಗಲ್: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಮೂಲಕ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ದೀಪ ಸಂಜೀವಿನಿ ಕಾರ್ಯಕ್ರಮದಲ್ಲಿ ದೀಪಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗಿದೆ ಎಮದು ತಾಲ್ಲೂಕು ಸಂಯೋಜನಾಧಿಕಾರಿ ಪ್ರಭಾಕರ್ ತಿಳಿಸಿದರು.
ದೀಪಸಂಜೀವಿನಿ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ತಾಲ್ಲೂಕಿನ 36 ಗ್ರಾಮ ಪಂಚಾಯಿತಿಯ ಸ್ವಸಹಾಯ ಸಂಘದ ಮಹಿಳೆಯರು ದೀಪಾವಳಿ ಪ್ರಯುಕ್ತ ವಿವಿಧ ನಮೂನೆಯ ಮಣ್ಣಿನ ದೀಪ ತಯಾರಿಸಿದ್ದು, ಮಾರಾಟ ಮತ್ತು ಪ್ರದರ್ಶನ ವ್ಯವಸ್ಥೆಯಲ್ಲಿ ದೀಪಾವಳಿ ಹಬ್ಬವನ್ನು ದೀಪಗಳನ್ನು ಖರೀದಿಸಿ ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಲು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.