ADVERTISEMENT

ಶಾಲೆಗೆ ಬೀಗ | ಶಿಕ್ಷಕಿಯರ ಕಿತ್ತಾಟದಿಂದ ಪಾಠಕ್ಕೆ ಅಡ್ಡಿ: ಮಕ್ಕಳ ಕಥೆ ಗೋವಿಂದ!

ಸಂಗೇನಹಳ್ಳಿ ಶಾಲೆಗೆ ಬೀಗಹಾಕಿ ಪೋಷಕರು

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2021, 3:22 IST
Last Updated 17 ಮಾರ್ಚ್ 2021, 3:22 IST
ಶಾಲೆಗೆ ಬೀಗ ಹಾಕಿ ವಿದ್ಯಾರ್ಥಿಗಳೊಂದಿಗೆ ಪೋಷಕರು ಪ್ರತಿಭಟನೆ ನಡೆಸಿದರು
ಶಾಲೆಗೆ ಬೀಗ ಹಾಕಿ ವಿದ್ಯಾರ್ಥಿಗಳೊಂದಿಗೆ ಪೋಷಕರು ಪ್ರತಿಭಟನೆ ನಡೆಸಿದರು   

ಹುಳಿಯಾರು: ಹೋಬಳಿಯ ಸಂಗೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯರ ಕಿತ್ತಾಟದಿಂದ ಮಕ್ಕಳ ಪಾಠ ಪ್ರವಚನಕ್ಕೆ ಅಡ್ಡಿಯಾಗಿರುವುದರಿಂದ ಶಿಕ್ಷಕಿಯರ ವರ್ಗಾವಣೆಗೆ ಒತ್ತಾಯಿಸಿ ಮಂಗಳವಾರ ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.

ಶಾಲೆಯಲ್ಲಿ 1ರಿಂದ 7ನೇ ತರಗತಿವರಿಗೆ 41 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇಬ್ಬರು ಶಿಕ್ಷಕಿಯರು ಕರ್ತವ್ಯ ನಿರ್ವಹಿಸುತ್ತಿದ್ದು, ನಿತ್ಯ ಇವರ ಕಿತ್ತಾಟದಿಂದ ನಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದು ಪ್ರತಿಭಟನನಿರತರು ಆರೋಪಿಸಿದರು.

ವಿದ್ಯಾರ್ಥಿಗಳ ಭವಿಷ್ಯದ ಜತೆ ಶಿಕ್ಷಕರು ಆಟ ಆಡುತ್ತಿದ್ದು ಕೂಡಲೇ ಸಂಬಂಧಪಟ್ಟ ಮೇಲಾಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವಂತೆ ಪಟ್ಟು ಹಿಡಿದರು.

ADVERTISEMENT

ಮುಖ್ಯಶಿಕ್ಷಕಿ ವಿದ್ಯಾರ್ಥಿಗಳಿಗೆ ಸರಿಯಾಗಿ ಪಠ್ಯಪುಸ್ತಕ ಸೇರಿದಂತೆ ಸಮವಸ್ತ್ರ ವಿತರಣೆ ಮಾಡಿಲ್ಲ. ಅಲ್ಲದೆ ಲೆಕ್ಕಪತ್ರಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಂದೀಶ್‌ ದೂರಿದರು. ಶಿಕ್ಷಣ ಇಲಾಖೆಯ ಇಸಿಒ ಮಂಜುನಾಥರಾಜ ಅರಸ್‌ ಸ್ಥಳಕ್ಕೆ ತೆರಳಿ ಪೋಷಕರ ಮನವೊಲಿಸಿ ಶಾಲೆಗೆ ಹಾಕಿದ್ದ ಬೀಗವನ್ನು ತೆರವುಗೊಳಿಸಿದರು.

ಪ್ರತಿಭಟನೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಸುವರ್ಣಮ್ಮ, ಗಾಯತ್ರಮ್ಮ, ಶಂಕರಣ್ಣ, ಕೋಕಿಲ, ಸಿದ್ದಗಂಗಮ್ಮ ಸೇರಿದಂತೆ ಪೋಷಕರು ಪಾಲ್ಗೊಂಡಿದ್ದರು.

‘ಬಹಳ ದಿನಗಳಿಂದ ಶಿಕ್ಷಕಿರಲ್ಲಿ ಒಳಜಗಳವಿದ್ದು ಹಲವಾರು ಬಾರಿ ಬುದ್ಧಿ ಹೇಳಿದರೂ ಪ್ರಯೋಜನವಾಗಿಲ್ಲ. ಬುಧವಾರ ಶಾಲೆಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುತ್ತೇನೆ’ ಬಿಎಒ ಕಾತ್ಯಾಯಿನಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.