ADVERTISEMENT

ಮಧುಗಿರಿ| ರೈತರಿಗೆ ಸಾಗುವಳಿ ಚೀಟಿ ವಿತರಣೆ

ಜಮೀನಿನ ಖಾತೆ ಮಾಡಿಸಿಕೊಳ್ಳಲು ಸಲಹೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 6:06 IST
Last Updated 29 ಮಾರ್ಚ್ 2023, 6:06 IST
ಮಧುಗಿರಿ ಪಟ್ಟಣದ ಮಾಲೀಮರಿಯಪ್ಪ ರಂಗ ಮಂದಿರದಲ್ಲಿ ತಾಲ್ಲೂಕು ಆಡಳಿತದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಂ.ವಿ. ವೀರಭದ್ರಯ್ಯ ಅರ್ಹರಿಗೆ ಕಂದಾಯ ಗ್ರಾಮಗಳ ಹಕ್ಕುಪತ್ರ ವಿತರಿಸಿದರು
ಮಧುಗಿರಿ ಪಟ್ಟಣದ ಮಾಲೀಮರಿಯಪ್ಪ ರಂಗ ಮಂದಿರದಲ್ಲಿ ತಾಲ್ಲೂಕು ಆಡಳಿತದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಂ.ವಿ. ವೀರಭದ್ರಯ್ಯ ಅರ್ಹರಿಗೆ ಕಂದಾಯ ಗ್ರಾಮಗಳ ಹಕ್ಕುಪತ್ರ ವಿತರಿಸಿದರು   

ಮಧುಗಿರಿ: ರೈತರು ಜಮೀನಿನ ಖಾತೆ ಮಾಡಿಸಿಕೊಂಡು ಸರ್ಕಾರದ ಸೌಲಭ್ಯ ಪಡೆಯಬೇಕು ಎಂದು ಶಾಸಕ ಎಂ.ವಿ. ವೀರಭದ್ರಯ್ಯ
ತಿಳಿಸಿದರು.

ಪಟ್ಟಣದ ಮಾಲೀಮರಿಯಪ್ಪ ರಂಗ ಮಂದಿರದಲ್ಲಿ ತಾಲ್ಲೂಕು ಆಡಳಿತದಿಂದ ಆಯೋಜಿಸಿದ್ದ ಕಂದಾಯ ಗ್ರಾಮಗಳ ಹಕ್ಕುಪತ್ರ ಹಾಗೂ ರೈತರಿಗೆ ಸಾಗುವಳಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ವಾಸಿಸುತ್ತಿರುವ 16 ರೈತರಿಗೆ ಸಾಗುವಳಿ ಚೀಟಿ ವಿತರಿಸಲಾಗಿದೆ ಎಂದರು.

ADVERTISEMENT

ತಾಲ್ಲೂಕಿನಲ್ಲಿ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿರುವ 1,089 ಮಂದಿಗೆ ಹಕ್ಕುಪತ್ರ ವಿತರಿಸಲಾಗುತ್ತಿದೆ. ಸರ್ಕಾರದ ಸೌಲಭ್ಯ ಪಡೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ಸಲಹೆ ನೀಡಿದರು.

ತಹಶೀಲ್ದಾರ್ ಸಿಗ್ಬತ್ ಉಲ್ಲಾ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ. ಜಯರಾಮಯ್ಯ, ಬಗರ್ ಹುಕುಂ ಸಮಿತಿ ಸದಸ್ಯರಾದ ಪ್ರಸನ್ನಕುಮಾರ್, ನಾರಾಯಣಪ್ಪ, ಉಮಾದೇವಿ, ಭೂ ದಾಖಲೆಗಳ ಸಹಾಯಕ ನಿರ್ದೇಶಕ ರಂಗನಾಥ, ಉಪ ತಹಶೀಲ್ದಾರ್ ನವೀನ್, ಉಮೇಶ ಬಾಬು, ಕಂದಾಯ ನಿರೀಕ್ಷಕ ಚನ್ನವೀರಪ್ಪ, ರವೀಂದ್ರ, ವೇಣುಗೋಪಾಲ, ನಾರಾಯಣಪ್ಪ, ನಾಗೇಶ್, ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಬಸವರಾಜು
ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.