ADVERTISEMENT

ಬಿತ್ತನೆ ಬೀಜ ವಿತರಣೆ

​ಪ್ರಜಾವಾಣಿ ವಾರ್ತೆ
Published 26 ಮೇ 2025, 16:21 IST
Last Updated 26 ಮೇ 2025, 16:21 IST
ಪಾವಗಡದಲ್ಲಿ ಸೋಮವಾರ ಶೇಂಗಾ ಬಿತ್ತನೆ ಬೀಜ ವಿತರಣೆಗೆ ಶಾಸಕ ಎಚ್.ವಿ ವೆಂಕಟೇಶ್ ಚಾಲನೆ ನೀಡಿದರು
ಪಾವಗಡದಲ್ಲಿ ಸೋಮವಾರ ಶೇಂಗಾ ಬಿತ್ತನೆ ಬೀಜ ವಿತರಣೆಗೆ ಶಾಸಕ ಎಚ್.ವಿ ವೆಂಕಟೇಶ್ ಚಾಲನೆ ನೀಡಿದರು   

ಪ್ರಜಾವಾಣಿ ವಾರ್ತೆ

ಪಾವಗಡ: ಕೃಷಿ ಇಲಾಖೆಯ ಸವಲತ್ತುಗಳನ್ನು ಬಳಸಿಕೊಂಡು ರೈತರು ಉತ್ತಮ ಬೆಳೆ ಬೆಳೆಯಬೇಕು ಎಂದು ಶಾಸಕ ಎಚ್.ವಿ ವೆಂಕಟೇಶ್ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಕೃಷಿ ಇಲಾಖೆಯಿಂದ ಶೇಂಗಾ ಸೇರಿದಂತೆ ಬಿತ್ತನೆ ಬೀಜಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.

ADVERTISEMENT

ಗುಣಮಟ್ಟದ ಬಿತ್ತನೆ ಬೀಜ ವಿತರಿಸಬೇಕು. ತಾಲ್ಲೂಕಿಗೆ ಒಟ್ಟು 750 ಕ್ವಿಂಟಲ್ ಬಿತ್ತನೆ ಶೇಂಗಾ ಬಂದಿದೆ. ರೈತರಿಗೆ ಅನುಕೂಲವಾಗುವಂತೆ ತಾಲ್ಲೂಕಿನ 5 ಕೇಂದ್ರಗಳಲ್ಲಿ ಬಿತ್ತನೆ ಬೀಜ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಜಯ್ ಕುಮಾರ್‌, ನಾಲ್ಕು ರೈತ ಸಂಪರ್ಕ ಕೇಂದ್ರ, ಲಿಂಗದಹಳ್ಳಿಯ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ಶೇಂಗಾ, ಭತ್ತ, ರಾಗಿ, ತೊಗರಿ, ಅಲಸಂದೆ ಬೀಜ ವಿತರಿಸಲಾಗುತ್ತಿದೆ ಎಂದರು.

ಬೇರೆ ಮಾರುಕಟ್ಟೆಗೆ ಹೋಲಿಸಿದರೆ ಕೃಷಿ ಇಲಾಖೆಯಿಂದ ವಿತರಿಸುತ್ತಿರುವ ಬಿತ್ತನೆ ಬೀಜದ ಬೆಲೆ ಹೆಚ್ಚಾಗಿದೆ. ಬೆಲೆಯನ್ನು ಕಡಿಮೆ ಮಾಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.

ಕೃಷಿ ಇಲಾಖೆಯ ಶಂಶುದ್ದಉನ್ನೀಸಾ, ಗುರುರಾಜ್, ಬಾಲಾಜಿ, ನಾಗೇಂದ್ರ, ಪೂಜಾರಪ್ಪ, ನರಸಿಂಹ ರೆಡ್ಡಿ, ಕೃಷ್ಣರಾವ್, ಶಿವು, ಶಿವಕುಮಾರ್, ಆರ್.ಎ.ಹನುಮಂತರಾಯಪ್ಪ, ಹರ್ಷ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.