ADVERTISEMENT

ಪೊಲೀಸರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ಸುಳ್ಳು ಮೊಕದ್ದೊಮೆ ದಾಖಲು; ಅಧಿಕಾರ ದುರುಪಯೋಗ

​ಪ್ರಜಾವಾಣಿ ವಾರ್ತೆ
Published 4 ಜೂನ್ 2022, 19:49 IST
Last Updated 4 ಜೂನ್ 2022, 19:49 IST
‘ಸಚಿವ ಬಿ.ಸಿ. ನಾಗೇಶ್ ಅವರ ತಿಪಟೂರು ಮನೆ ಎದುರು ಪ್ರತಿಭಟನೆ ನಡೆಸಿದ್ದ ಎನ್‌ಎಸ್‌ಯುಐ ರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್ ಅವರನ್ನು ಅಕ್ರಮವಾಗಿ ಬಂಧಿಸಲಾಗಿದೆ’ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ಕೆಲ ಗಂಟೆಗಳ ಬಳಿಕ ಬಿಡುಗಡೆ ಮಾಡಿದರು – ಪ್ರಜಾವಾಣಿ ಚಿತ್ರ

ತುಮಕೂರು: ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಬಳಿ ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿ ಜೈಲಿಗೆ ಕಳುಹಿಸಿರುವ ಪೊಲೀಸ್ ಅಧಿಕಾರಿಗಳು ಮುಂದಿನ ದಿನಗಳಲ್ಲಿಉತ್ತರ ಕೊಡಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದರು.

ಜಿಲ್ಲಾ ಕಾರಾಗೃಹದಲ್ಲಿರುವ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಶನಿವಾರ ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಅವರ ಒತ್ತಡಕ್ಕೆ ಮಣಿದು ಪ್ರತಿಭಟನಕಾರರ ವಿರುದ್ಧ ಸುಳ್ಳು ಸೆಕ್ಷನ್‌ ಹಾಕಿಜಾಮೀನು ಸಿಗದಂತೆ ಮಾಡಲಾಗಿದೆ. ಈ ಕೃತ್ಯಕ್ಕಾಗಿ ಪೊಲೀಸ್ ಅಧಿಕಾರಿಗಳೂ ಮುಂದೆ ಶಿಕ್ಷೆ ಅನುಭವಿಸ
ಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.