
ಪ್ರಜಾವಾಣಿ ವಾರ್ತೆ
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿ ಹುಲಿಯೂರುದುರ್ಗದ ಹಳೇವೂರಮ್ಮ ದೇವಾಲಯದಲ್ಲಿ ಪೂಜೆ ನಡೆಯಿತು
ಕುಣಿಗಲ್: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿ ಹುಲಿಯೂರುದುರ್ಗ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಹುಲಿಯೂರುದುರ್ಗದ ಹಳೇವೂರಮ್ಮ ದೇವಾಲಯದಲ್ಲಿ ಪೂಜೆ, ಚಂಡಿಕಾ ಹೋಮ ನಡೆಸಿದರು.
ಸೋಮವಾರ ರಾತ್ರಿಯಿಂದಲೇ ಪೂಜೆಗಳು ನಡೆದಿದ್ದು, ಮಂಗಳವಾರ ಬೆಳಗ್ಗೆ ಚಂಡಿಕಾ ಹೋಮ ನಡೆಯಿತು. ಹಂಗರಹಳ್ಳಿ ವಿದ್ಯಾ ಚೌಡೇಶ್ವರಿ ಮಠದ ಬಾಲಮಂಜುನಾಥ ಸ್ವಾಮೀಜಿ, ಶಾಸಕ ಡಾ.ರಂಗನಾಥ್ ಪೂಜೆಯಲ್ಲಿ ಭಾಗವಹಿಸಿದ್ದರು.
ರಂಗನಾಥ್ ಮಾತನಾಡಿ, ‘ಕಾರ್ಯಕರ್ತರ ಮನಸ್ಥಿತಿಗೆ ಒಪ್ಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುವೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲೆಂದು ಅಪೇಕ್ಷೆ ಪಡುತ್ತಿದ್ದು, ದೈವ ಬಲದ ಕೃಪೆಯಿಂದ ಮುಖ್ಯಮಂತ್ರಿಯಾಗಬಹುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.