ADVERTISEMENT

ಡಿಕೆಶಿ ಯಾಕಾಗಿ ದೆಹಲಿಗೆ ಹೋಗಿದ್ದಾರೋ ಗೊತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 16 ಜನವರಿ 2026, 12:47 IST
Last Updated 16 ಜನವರಿ 2026, 12:47 IST
<div class="paragraphs"><p>ಸಿದ್ದರಾಮಯ್ಯ&nbsp;</p></div>

ಸಿದ್ದರಾಮಯ್ಯ 

   

ತುಮಕೂರು: ‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ವಿಚಾರ ನನಗೆ ಗೊತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಡಿ.ಕೆ.ಶಿವಕುಮಾರ್ ದೆಹಲಿಗೆ ಏತಕ್ಕೆ ಹೋಗಿದ್ದಾರೆ, ಹೈಕಮಾಂಡ್ ಭೇಟಿ ಬಗ್ಗೆ ಗೊತ್ತಿಲ್ಲ’ ಎಂದರು.

ADVERTISEMENT

ಶಾಸಕ ಕೆ.ಎನ್.ರಾಜಣ್ಣ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಈ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.