ADVERTISEMENT

ನಿರ್ದೇಶಕ ಟಿ.ಎಸ್. ನಾಗಾಭರಣಗೆ ತುಮಕೂರು ವಿವಿಯಿಂದ ಗೌರವ ಡಾಕ್ಟರೇಟ್

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2023, 14:06 IST
Last Updated 5 ಆಗಸ್ಟ್ 2023, 14:06 IST
ಟಿ.ಎಸ್.ನಾಗಾಭರಣ
ಟಿ.ಎಸ್.ನಾಗಾಭರಣ   

ತುಮಕೂರು: ಚಲನಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ ಹಾಗೂ ಸಮಾಜ ಸೇವಕ ನಗರದ ಆರ್.ಎಲ್.ರಮೇಶ್ ಬಾಬು ಅವರಿಗೆ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲಿದೆ.

ಕನ್ನಡ ಚಲನಚಿತ್ರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಗುರುತಿಸಿ ನಾಗಾಭರಣ ಅವರಿಗೆ ಹಾಗೂ ತುಮಕೂರು ವಿ.ವಿ ಕಲಾ ಕಾಲೇಜಿನಲ್ಲಿ ಮಧ್ಯಾಹ್ನದ ಬಿಸಿ ಊಟಕ್ಕೆ ನೆರವು ನೀಡುತ್ತಿರುವ ಆರ್.ಎಲ್.ರಮೇಶ್ ಬಾಬು ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು.

ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲು ನೇಮಿಸಿದ್ದ ಸಮಿತಿ ಮಾಡಿದ್ದ ಶಿಫಾರಸಿಗೆ ರಾಜ್ಯಪಾಲರು ಒಪ್ಪಿಗೆ ನೀಡಿ, ಇಬ್ಬರನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು.

ADVERTISEMENT

ಸೋಮವಾರ (ಆಗಸ್ಟ್‌ 7) ತುಮಕೂರು ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 16ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ ಗೆಹಲೋತ್‌ ಅವರು ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಿದ್ದಾರೆ.

ಆರ್.ಎಲ್.ರಮೇಶ್ ಬಾಬು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.