ದೊಡ್ಡಬಳ್ಳಾಪುರ: ಇಲ್ಲಿನ ಶಾಂತಿನಗರದ ಮುತ್ಯಾಲಮ್ಮ ಸೇವಾ ದತ್ತಿ ನೇತೃತ್ವದಲ್ಲಿ ಮಂಗಳವಾರ ಮುತ್ಯಾಲಮ್ಮದೇವಿ ರಥೋತ್ಸವ ನಡೆಯಿತು. ರಥೋತ್ಸವದಲ್ಲಿ ವೀರಗಾಸೆ, ಡೊಳ್ಳು ಕುಣಿತ, ತಮಟೆ ಮುಂತಾದ ಕಲಾತಂಡಗಳು ಭಾಗವಹಿಸಿದ್ದವು.
ತಾಲ್ಲೂಕಿನ ದರ್ಗಾಜೋಗಿಹಳ್ಳಿ,ರೋಜಿಪುರ,ನಾಗಸಂದ್ರ ಗ್ರಾಮಗಳಿಂದಲ್ಲೂ ಮುತ್ಯಾಲಮ್ಮ ಜಾತ್ರೆಗೆ ಮಂಗಳವಾರ ಸಂಜೆ ಕುರ್ಜುಗಳಲ್ಲಿ ಆಯಾ ಗ್ರಾಮದ ದೇವರುಗಳನ್ನು ಪ್ರತಿಷ್ಠಾಪಿಸಿಕೊಂಡು ಹೂವಿನ ಆರತಿಗಳೊಂದಿಗೆ ಆಗಮಿಸಿದ್ದವು. ಕುರುಬರಹಳ್ಳಿ, ಕೊಡಿಗೇಹಳ್ಳಿ, ರೋಜಿಪುರ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಗ್ರಾಮಸ್ಥರಿಂದಲೂ ಹೂವಿನ ಆರತಿ ಉತ್ಸವ ನಡೆಯಿತು. ಬುಧವಾರ ಹಗಲು ಪರಿಷೆ ನಡೆಯಲಿದೆ. ದೇವಾಲಯದಲ್ಲಿ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು. ಜಾತ್ರೆಗೆ ಆಗಮಿಸಿದ್ದ ಸಾವಿರಾರು ಜನ ಭಕ್ತರಿಗೆ ದೇವಾಲಯದ ವತಿಯಿಂದ ಪ್ರಸಾದ ವಿತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.