ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿಯ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ಯುವಕರು ಹತ್ಯೆಯಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಮೃತರನ್ನು ಪೆದ್ದನಹಳ್ಳಿಯ ಗಿರೀಶ್ (35) ಹಾಗೂ ಮಂಚಲದೊರೆ ಗ್ರಾಮದ ಗಿರೀಶ್(33) ಎಂದು ಗುರುತಿಸಲಾಗಿದೆ. ಒಬ್ಬರ ಶವ ನೀರಿನಲ್ಲಿ, ಮತ್ತೊಬ್ಬರ ಶವ ರಸ್ತೆಯಲ್ಲಿ ಬಿದ್ದಿದೆ.
ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಹತ್ಯೆಗೀಡಾಗಿರುವ ಯುವಕರು ಅನೇಕ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆ ಗುಬ್ಬಿ ಹಾಗೂ ಚೇಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿವೆ ಎಂದು ತಿಳಿದು ಬಂದಿದೆ. ಗುಬ್ಬಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.