ADVERTISEMENT

ಕೊಡಿಗೇನಹಳ್ಳಿ: ಕುಡಿಯುವ ನೀರಿನಗಾಗಿ ಪಂಚಾಯಿತಿ ಮುಂದೆ ಒಲೆ ಹಚ್ಚಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2025, 7:17 IST
Last Updated 2 ಡಿಸೆಂಬರ್ 2025, 7:17 IST
ಕೊಡಿಗೇನಹಳ್ಳಿ ಹೋಬಳಿಯ ಅಡವಿನಾಗೇನಹಳ್ಳಿ ಗ್ರಾಮಸ್ಥರು ಸೋಮವಾರ ಸಿಂಗನಹಳ್ಳಿ ಪಂಚಾಯಿತಿ ಮುಂದೆ ನೀರಿಗಾಗಿ ಒಲೆಹಚ್ಚಿ ಪ್ರತಿಭಟನೆ ನಡೆಸಿದರು
ಕೊಡಿಗೇನಹಳ್ಳಿ ಹೋಬಳಿಯ ಅಡವಿನಾಗೇನಹಳ್ಳಿ ಗ್ರಾಮಸ್ಥರು ಸೋಮವಾರ ಸಿಂಗನಹಳ್ಳಿ ಪಂಚಾಯಿತಿ ಮುಂದೆ ನೀರಿಗಾಗಿ ಒಲೆಹಚ್ಚಿ ಪ್ರತಿಭಟನೆ ನಡೆಸಿದರು   

ಕೊಡಿಗೇನಹಳ್ಳಿ: 6 ತಿಂಗಳಿಂದ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತು ಗ್ರಾಮಸ್ಥರಿಗೆ ತೊಂದರೆಯಾಗುತ್ತಿದ್ದರೂ ಸಂಬಂಧಿಸಿದ ಯಾರೊಬ್ಬರು ಗಮನಹರಿಸುತ್ತಿಲ್ಲ ಎಂದು ಆರೋಪಿಸಿ ಸೋಮವಾರ ಅಡವಿನಾಗೇನಹಳ್ಳಿ ಗ್ರಾಮಸ್ಥರು ಸಿಂಗನಹಳ್ಳಿ ಗ್ರಾಮ ಪಂಚಾಯಿತಿ ಮುಂದೆ ಒಲೆಹಚ್ಚಿ ಪ್ರತಿಭಟನೆ ನಡೆಸಿದರು.

ಬೆಳಿಗ್ಗೆಯಿಂದ ಸಿಂಗನಹಳ್ಳಿ ಗ್ರಾಮ ಪಂಚಾಯಿತಿ ಮುಂದೆ ಧರಣಿ ಕುಳಿತು ನೀರು ಬೇಕು ಎಂದು ಕೇಳುತ್ತಿದ್ದೇವೆ. ಅಧ್ಯಕ್ಷ, ಪಿಡಿಒ ಹಾಗೂ ಅಧಿಕಾರಿಗಳು ಉಡಾಫೆ ಉತ್ತರ ನೀಡುತ್ತಿದ್ದಾರೆಯೇ ಹೊರತು ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಕುಡಿಯುವ ನೀರಿಲ್ಲದೆ ವಯಸ್ಸಾದವರು, ಮಕ್ಕಳು ಜ್ವರ, ಕೆಮ್ಮು, ನೆಗಡಿಯಂತಹ ಕಾಯಿಲೆಯಿಂದ ಬಳಲುತ್ತಿದ್ದಾರೆ. ಪಿಡಿಒಗೆ ಎಷ್ಟೋ ಬಾರಿ ಅರ್ಜಿ ಕೊಟ್ಟಿದ್ದಾರೆ. ಸಮಸ್ಯೆಗೆ ಸ್ಪಂದಿಸದಿದ್ದರೆ ತಾಲ್ಲೂಕು ಕಚೇರಿ ಮುಂದೆ ಧರಣಿ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಅಡವಿನಾಗೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಇಂದು ಗೊತ್ತಾಗಿದೆ. ತಾತ್ಕಾಲಿಕವಾಗಿ ನೀರು ಸರಬರಾಜು ಮಾಡಲು ವ್ಯವಸ್ಥೆ ಮಾಡಿಸಿದ್ದು, ಮಂಗಳವಾರ ಸಂಜೆಯೊಳಗೆ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಲಾಗುವುದು ಎಂದು ಎಇಇ ಲೋಕೇಶಪ್ಪ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.