ADVERTISEMENT

ಮಧುಗಿರಿ | ಕುಡಿಯುವ ನೀರು: ಪ್ರತಿ ತಾಲ್ಲೂಕಿಗೆ ₹85 ಲಕ್ಷ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 25 ಮೇ 2024, 4:48 IST
Last Updated 25 ಮೇ 2024, 4:48 IST
ಮಧುಗಿರಿ ಕೃಷಿ ಮಾರುಕಟ್ಟೆಯಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ ನೀಡಿ ಪರಿಶೀಲಿಸಿದರು
ಮಧುಗಿರಿ ಕೃಷಿ ಮಾರುಕಟ್ಟೆಯಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ ನೀಡಿ ಪರಿಶೀಲಿಸಿದರು   

ಮಧುಗಿರಿ: ಜಿಲ್ಲೆಯಲ್ಲಿ 20 ಮೇವು ಕೇಂದ್ರ ತೆರೆದು ಜಾನುವಾರುಗಳಿಗೆ ಮೇವು ವಿತರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು.

ತಾಲ್ಲೂಕಿನ ಬೆಳೆ ಹಾನಿ ಪ್ರದೇಶಗಳಿಗೆ ಹಾಗೂ ಮೇವು ಬ್ಯಾಂಕ್ ಕೇಂದ್ರಗಳಿಗೆ ಶುಕ್ರವಾರ ಭೇಟಿ ನೀಡಿ ಮಾತನಾಡಿದರು.

ಸರ್ಕಾರ ರೈತರ ಜಾನುವಾರುಗಳಿಗೆ ರಿಯಾಯಿತಿ ದರದಲ್ಲಿ ಮೇವು ವಿತರಣೆ ಮಾಡಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವುದು ಸಂತಸ ತಂದಿದೆ. ಈಗಾಗಲೇ ಬಿತ್ತನೆ ಕಾರ್ಯಕ್ಕೆ ತೊಂದರೆಯಾಗದಂತೆ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಆಯಾ ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ADVERTISEMENT

ಜಿಲ್ಲೆಯ ಪ್ರತಿ ತಾಲ್ಲೂಕು ಕುಡಿಯುವ ನೀರಿನ ಸಮಸ್ಯೆ ಆಗದಂತೆ ಪ್ರತಿ ತಾಲ್ಲೂಕಿಗೆ ₹85 ಲಕ್ಷ ಬಿಡುಗಡೆ ಮಾಡಲಾಗಿದೆ. ನೀರಿನ ಸಮಸ್ಯೆ ಇರುವೆಡೆ ಕೊಳವೆ ಬಾವಿಗಳನ್ನು ಕೊರೆದು ಜನರಿಗೆ ನೀರು ಕೊಡುವ ಕೆಲಸ ಮಾಡಲಾಗುತ್ತಿದೆ ಎಂದರು.

ಉಪವಿಭಾಗಾಧಿಕಾರಿ ಗೋಟೋರು ಶಿವಪ್ಪ, ತಹಶೀಲ್ದಾರ್ ಸಿಗ್ಮತ್ ಉಲ್ಲಾ, ಕೃಷಿ ಉಪನಿರ್ದೇಶಕ ಚಂದ್ರಶೇಖರ್, ತಾ.ಪಂ.ಎಡಿಎ ಮಧುಸೂದನ್, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಲೋಕೇಶ್ವರಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.