ADVERTISEMENT

ಕಸ ಸಂಗ್ರಹ ವಾಹನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 3:37 IST
Last Updated 13 ಜನವರಿ 2021, 3:37 IST
ಕೈಗಾರಿಕಾ ಪ್ರದೇಶದಲ್ಲಿ ಕಸ ಸಂಗ್ರಹ ವಾಹನಕ್ಕೆ ಚಾಲನೆ ನೀಡಲಾಯಿತು
ಕೈಗಾರಿಕಾ ಪ್ರದೇಶದಲ್ಲಿ ಕಸ ಸಂಗ್ರಹ ವಾಹನಕ್ಕೆ ಚಾಲನೆ ನೀಡಲಾಯಿತು   

ತುಮಕೂರು: ನಗರದ ಹೃದಯ ಭಾಗದಲ್ಲಿರುವ ಸಣ್ಣ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಕಸ ಸಂಗ್ರಹಕ್ಕೆ ಮಹಾನಗರ ಪಾಲಿಕೆ ವಾಹನ ವ್ಯವಸ್ಥೆ ಮಾಡಿದ್ದು, ಮಂಗಳವಾರ ಚಾಲನೆ ನೀಡಲಾಯಿತು.

ಕೈಗಾರಿಕಾ ಪ್ರದೇಶದಲ್ಲಿ ಘನತ್ಯಾಜ್ಯ ಸಂಗ್ರಹ ದೊಡ್ಡ ಸಮಸ್ಯೆಯಾಗಿ ಕಾಡಿತ್ತು. ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.

ಪಾಲಿಕೆ ಆಯುಕ್ತೆ ರೇಣುಕಾ, ತುಮಕೂರು ಮಹಾನಗರ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ರಾಜಗೋಪಾಲರೆಡ್ಡಿ ಕಸ ಸಂಗ್ರಹಿಸುವ ಆಟೊಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ADVERTISEMENT

ರಾಜಗೋಪಾಲರೆಡ್ಡಿ,ರೇಣುಕಾ ಪಾಲಿಕೆ ಸದಸ್ಯ ಶ್ರೀನಿವಾಸ್, ಸಂಘದ ಉಪಾಧ್ಯಕ್ಷ ಸಿದ್ಧಪ್ಪ, ಕಾರ್ಯದರ್ಶಿ ಗಿರೀಶ್, ಖಜಾಂಚಿ ಲೋಕೇಶ್, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.