ADVERTISEMENT

ತುಮಕೂರು | ಛಾಯಾಗ್ರಾಹಕರಿಗೆ ಇ-ಶ್ರಮ್ ಕಾರ್ಡ್

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2025, 3:59 IST
Last Updated 25 ಆಗಸ್ಟ್ 2025, 3:59 IST
<div class="paragraphs"><p>ತುಮಕೂರಿನಲ್ಲಿ ಶನಿವಾರ ಜಿಲ್ಲಾ ಫೋಟೊ ಮತ್ತು ವಿಡಿಯೋಗ್ರಾಫರ್ಸ್‌ ಸಂಘದಿಂದ ಹಮ್ಮಿಕೊಂಡಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ, ಛಾಯಾಗ್ರಾಹಕರ ಜಿಲ್ಲಾ ಸಮಾವೇಶದಲ್ಲಿ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು.</p></div>

ತುಮಕೂರಿನಲ್ಲಿ ಶನಿವಾರ ಜಿಲ್ಲಾ ಫೋಟೊ ಮತ್ತು ವಿಡಿಯೋಗ್ರಾಫರ್ಸ್‌ ಸಂಘದಿಂದ ಹಮ್ಮಿಕೊಂಡಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ, ಛಾಯಾಗ್ರಾಹಕರ ಜಿಲ್ಲಾ ಸಮಾವೇಶದಲ್ಲಿ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು.

   

ತುಮಕೂರು: ಜಿಲ್ಲೆಯ ಎಲ್ಲ ಛಾಯಾಗ್ರಾಹಕರಿಗೆ ಇ-ಶ್ರಮ್ ಕಾರ್ಡ್‌ ನೀಡುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಹೇಳಿದರು.

ನಗರ ಹೊರವಲಯದ ಭೀಮಸಂದ್ರದಲ್ಲಿ ಶನಿವಾರ ಜಿಲ್ಲಾ ಫೋಟೊ ಮತ್ತು ವಿಡಿಯೋಗ್ರಾಫರ್ಸ್ ಸಂಘದಿಂದ ಹಮ್ಮಿಕೊಂಡಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ, ಛಾಯಾಗ್ರಾಹಕರ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದರು.

ADVERTISEMENT

ಫೋಟೋಗ್ರಾಫರ್‌ಗಳು ಸಂಸ್ಕೃತಿಯ ಕಾವಲುಗಾರರು. ಫೋಟೋಗ್ರಫಿ ಜನರ ಹೃದಯ ಮುಟ್ಟುವಂತಿರಬೇಕು. ಎಲ್ಲ ಕಾರ್ಯಕ್ರಮ ಶಾಶ್ವತವಾಗಿ ನಮ್ಮ ನೆನಪಿನಲ್ಲಿ ಉಳಿಯುವಲ್ಲಿ ಫೋಟೋಗ್ರಾಫರ್‌ಗಳ ಪಾತ್ರ ಬಹು ಮುಖ್ಯ. ಮುಂದಿನ ದಿನಗಳಲ್ಲಿ ಮತ್ತಷ್ಟು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.

ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಂ.ಅಂಬಿಕಾ, ‘ಛಾಯಾಗ್ರಾಹಕರು ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಸಂಘದ ಎಲ್ಲ ಪದಾಧಿಕಾರಿಗಳಿಗೆ ಶ್ರೀದೇವಿ ಆಸ್ಪತ್ರೆಯಿಂದ ಆರೋಗ್ಯ ಕಾರ್ಡ್ ನೀಡಲಾಗುವುದು’ ಎಂದರು.

ಕೇಂದ್ರ ಜಲ‌ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಶಾಸಕ ಜಿ.ಬಿ.ಜ್ಯೋತಿಗಣೇಶ್, ರಾಜ್ಯ ಛಾಯಾಚಿತ್ರ ಗ್ರಾಹಕರ ಸಂಘದ ಅಧ್ಯಕ್ಷ ಎಚ್.ಎಸ್.ನಾಗೇಶ್, ಜಿಲ್ಲಾ ಫೋಟೊ ಮತ್ತು ವಿಡಿಯೊಗ್ರಾಫರ್ಸ್ ಸಂಘದ ಅಧ್ಯಕ್ಷ ಟಿ.ಎಚ್‌.ಅನಿಲ್‌ಕುಮಾರ್, ಪದಾಧಿಕಾರಿಗಳಾದ ಸಂತೋಷ್, ನವೀನ್, ಮೋಹನ್‌ಕುಮಾರ್, ರಮೇಶ್ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.