ADVERTISEMENT

ತುಮಕೂರು | ಪಂಜಿಗಾನಹಳ್ಳಿ ಶಾಲೆಗೆ ಡಿಡಿಪಿಐ ಭೇಟಿ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2022, 7:30 IST
Last Updated 8 ಮಾರ್ಚ್ 2022, 7:30 IST
ಶಿರಾ ತಾಲ್ಲೂಕಿನ ಪಂಜಿಗಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಸೋಮವಾರ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ. ರೇವಣ್ಣಸಿದ್ದಪ್ಪ ಭೇಟಿ ನೀಡಿ ಪರಿಶೀಲಿಸಿದರು
ಶಿರಾ ತಾಲ್ಲೂಕಿನ ಪಂಜಿಗಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಸೋಮವಾರ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ. ರೇವಣ್ಣಸಿದ್ದಪ್ಪ ಭೇಟಿ ನೀಡಿ ಪರಿಶೀಲಿಸಿದರು   

ಶಿರಾ: ತಾಲ್ಲೂಕಿನ ಪಂಜಿಗಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಸೋಮವಾರ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ. ರೇವಣ್ಣಸಿದ್ದಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಲೆಯ ಕಟ್ಟಡ ಶಿಥಿಲವಾಗಿರುವುದನ್ನು ಪರಿಶೀಲಿಸಿದ ಉಪ ನಿರ್ದೇಶಕರು, ಮುಖ್ಯಶಿಕ್ಷಕರು ಹಾಗೂ ಸಹ ಶಿಕ್ಷಕರು ದಾನಿಗಳಿಂದ ಜಮೀನು ಪಡೆದು ಹೊಸ ಶಾಲಾ ಕೊಠಡಿ ನಿರ್ಮಾಣ ಮಾಡುತ್ತಿರುವುದನ್ನು ಗಮನಿಸಿ ಅವರ ಶ್ರಮವನ್ನು ಶ್ಲಾಘಿಸಿದರು.

ವಿದ್ಯಾರ್ಥಿಗಳಲ್ಲಿನ ಕಲಿಕಾ ಮನೋಭಾವ ಹಾಗೂ ತಾವು ಭೇಟಿ ನೀಡಿದ ಸಮಯದಲ್ಲಿ ಬಿಸಿಯೂಟದ ಸಮಯವಾಗಿದ್ದು, ವಿದ್ಯಾರ್ಥಿಗಳು ಶಿಸ್ತಿನಿಂದ ಕುಳಿತಿರುವುದನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕಲಿಕೆಗೆ ಪೂರಕವಾಗುವಂತೆ ಶಿಕ್ಷಕರು ಬೋಧನೆ ನಡೆಸುತ್ತಿದೆ. ಇದನ್ನು ಮುಂದುವರಿಸಿಕೊಂಡು ಹೋಗುವಂತೆ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.