ADVERTISEMENT

ಈದ್ ಉಲ್ ಫಿತ್ರ್: ಸಾಮುಹಿಕ ವಿಶೇಷ ಪ್ರಾರ್ಥನೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2019, 7:39 IST
Last Updated 5 ಜೂನ್ 2019, 7:39 IST
ತುಮಕೂರಿನಲ್ಲಿ ಬುಧವಾರ ಮುಸ್ಲಿಮರು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ತುಮಕೂರಿನಲ್ಲಿ ಬುಧವಾರ ಮುಸ್ಲಿಮರು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.   

ತುಮಕೂರು: ನಗರದ ಕುಣಿಗಲ್ ರಸ್ತೆಯ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಈದ್ ಉಲ್ ಫಿತ್ರ್ ಪ್ರಯುಕ್ತ ಸಾಮುಹಿಕ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಸಂಸದ ಜಿ.ಎಸ್.ಬಸವರಾಜ್, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ , ತಹಶೀಲ್ದಾರ್ ನಾಗರಾಜ್ ಅವರು ಈದ್ಗಾ ಮೈದಾನದ ಬಳಿ ಮುಸ್ಲಿಮರಿಗೆ ಹಬ್ಬದ ಶುಭಾಶಯ ಕೋರಿದರು.

ಮಾಜಿ ಶಾಸಕ ಡಾ.ರಫೀಕ್ ಅಹಮ್ಮದ್, ಜಿಲ್ಲಾ ಕಾಂಗ್ರೆಸ್ ಮಾಜಿ ಅದ್ಯಕ್ಷ ಷಫೀ ಅಹಮ್ಮದ್ ಸೇರಿದಂತೆ ಮುಸ್ಲಿಂ ಮುಖಂಡರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪೊಲೀಸ್ ಅಧಿಕಾರಿಗಳನ್ನು ಸತ್ಕರಿಸಿದರು.

ADVERTISEMENT

ಪುಟಾಣಿ ಮಕ್ಕಳು ಪೋಷಕರೊಂದಿಗೆ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದು ಗಮನ ಸೆಳೆಯಿತು.

ತುಮಕೂರಿನಲ್ಲಿ ಈದ್ ಉಲ್ ಫಿತ್ರ್ ಶುಭಾಶಯ ಕೋರಿದ ಸಂಸದ ಜಿ.ಎಸ್.ಬಸವರಾಜ್ ಅವರನ್ನು ಮಾಜಿ ಶಾಸಕ ಡಾ.ರಫೀಕ್ ಅಹಮ್ಮದ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಷಫೀ ಅಹಮ್ಮದ್ ಅವರು ಸತ್ಕರಿಸಿದರು.
ತುಮಕೂರಿನಲ್ಲಿ ಈದ್ ಉಲ್ ಫಿತ್ರ್ ಶುಭಾಶಯ ಕೋರಿದ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಂಶಿಕೃಷ್ಣ ಅವರನ್ನು ಮಾಜಿ ಶಾಸಕ ಡಾ.ರಫೀಕ್ ಅಹಮ್ಮದ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಷಫೀ ಅಹಮ್ಮದ್ ಅವರು ಸನ್ಮಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.