ಮಧುಗಿರಿ: ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಮರು ಸೋಮವಾರ ಪಟ್ಟಣದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಸೋಮವಾರ ಬೆಳಗ್ಗೆ 10 ಗಂಟೆಗೆ ನೂರಾರು ಸಂಖ್ಯೆಯಲ್ಲಿ ಮುಸ್ಲಿಮರು ಹೊಸ ಉಡುಪುಗಳನ್ನು ತೊಟ್ಟು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು. ಮಸೀದಿ ಮತ್ತು ಈದ್ಗಾ ಮೈದಾನದಲ್ಲಿ ವಿಶೇಷ ಪ್ರವಚನ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.
ಪುರಸಭೆ ಮಾಜಿ ಅಧ್ಯಕ್ಷ ಮೊಹಮದ್ ಅಯೂಬ್, ಅಲೀಮ್, ಜಾಫರ್ ಸಾಧಿಕ್, ಕಲೀಲ್, ಸಯ್ಯದ್ ಕರೀಂ, ಬಾಬಾ ಫಕೃದ್ದೀನ್, ಶಾಜು, ಶಫಿ ಅಹಮದ್, ಅಲೀಮ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.