ADVERTISEMENT

ತುಮಕೂರು | ವಿದ್ಯುತ್‌ ಸ್ಪರ್ಶ: ಕೂಲಿ ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2024, 4:50 IST
Last Updated 11 ಸೆಪ್ಟೆಂಬರ್ 2024, 4:50 IST

ತುಮಕೂರು: ತಾಲ್ಲೂಕಿನ ಮಲ್ಲಸಂದ್ರ ಹೋಬಳಿಯ ಅದಲಾಪುರ ಗ್ರಾಮದ ಹೊರವಲಯದಲ್ಲಿ ಮಂಗಳವಾರ ತೆಂಗಿನಕಾಯಿ ಕೀಳುವಾಗ ವಿದ್ಯುತ್‌ ಸ್ಪರ್ಶಿಸಿ ಮದನ್‌ (24) ಎಂಬುವರು ಮೃತಪಟ್ಟಿದ್ದಾರೆ.

ಗುಬ್ಬಿ ತಾಲ್ಲೂಕಿನ ಅಡಗೂರು ಗ್ರಾಮದ ನಿವಾಸಿಯಾಗಿರುವ ಮದನ್, ಕೂಲಿ ಕೆಲಸ ಮಾಡಿಕೊಂಡಿದ್ದರು. ರೋಟಿಯಿಂದ ಕಾಯಿ ಕೀಳುವಾಗ ಮರದ ಪಕ್ಕದಲ್ಲಿದ್ದ ವಿದ್ಯುತ್‌ ತಂತಿಗೆ ತಗುಲಿ ವಿದ್ಯುತ್‌ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT