ಸಾವು (ಪ್ರಾತಿನಿಧಿಕ ಚಿತ್ರ)
ಚಿಕ್ಕನಾಯಕನಹಳ್ಳಿ: ಪಟ್ಟಣದ ಅರಣ್ಯ ಇಲಾಖೆ ಕಚೇರಿ ಬಳಿಯ ಮನೆಯ ಮುಂದೆ ಆಟವಾಡುತಿದ್ದಾಗ ವಿದ್ಯುತ್ ಸ್ಪರ್ಶಿಸಿ ಅಚ್ಯುತ್ (12) ಎಂಬ ಬಾಲಕ ಸೋಮವಾರ ಮೃತಪಟ್ಟಿದ್ದಾನೆ.
ಮನೆಯ ಮುಂಭಾಗದ ಕಬ್ಬಿಣದ ಕಂಬಕ್ಕೆ ವಿದ್ಯುತ್ ಸ್ಪರ್ಶಿಸಿದ್ದು, ಇದು ತಿಳಿಯದೆ ಕಂಬ ಮುಟ್ಟಿದ್ದರಿಂದ ಅನಾಹುತ ಸಂಭವಿಸಿದೆ. ತಕ್ಷಣ ಜತೆಯಲ್ಲಿದ್ದ ಗೆಳೆಯರು ಅಚ್ಯುತ್ ಪೋಷಕರಿಗೆ ವಿಷಯ ತಿಳಿಸಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಬಾಲಕ ಸಾವನ್ನಪ್ಪಿದ್ದಾನೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.