ADVERTISEMENT

ವಿದ್ಯಾರ್ಥಿ ದೆಸೆಯಲ್ಲಿ ಕಲಿಕೆಗೆ ಒತ್ತು ನೀಡಿ

ನಗರದಲ್ಲಿ ನಡೆದ ಸಿಇಟಿ ಹಾಗೂ ನೀಟ್‌ ಪರೀಕ್ಷೆಗಳ ತರಬೇತಿ ಶಿಬಿರದಲ್ಲಿ ಡಾ.ಪರಮೇಶ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 2 ಜೂನ್ 2019, 20:06 IST
Last Updated 2 ಜೂನ್ 2019, 20:06 IST
ಶಿಬಿರದಲ್ಲಿ ಡಾ.ಪರಮೇಶ ಮಾತನಾಡಿದರು. ಡಾ.ಸಿಬಂತಿ ಪದ್ಮನಾಭ ಇದ್ದಾರೆ
ಶಿಬಿರದಲ್ಲಿ ಡಾ.ಪರಮೇಶ ಮಾತನಾಡಿದರು. ಡಾ.ಸಿಬಂತಿ ಪದ್ಮನಾಭ ಇದ್ದಾರೆ   

ತುಮಕೂರು: ವಿದ್ಯಾರ್ಥಿ ದೆಸೆಯಲ್ಲಿ ಕಲಿಕೆ ಬಿಟ್ಟು ಬೇರೆ ಆಸೆ ಆಮಿಷಗಳಿಗೆ ಒಳಗಾಗಬಾರದು ಎಂದು ಸಿದ್ಧಗಂಗಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪರಮೇಶ ಅಭಿಪ್ರಾಯಪಟ್ಟರು.

ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಸಿದ್ಧಗಂಗಾ ಸಂಸ್ಥೆಯ ರಜತ ಮಹೋತ್ಸವ ಸ್ಮರಣಾರ್ಥವಾಗಿ ಗ್ರಾಮೀಣ ಬಡ ಪ್ರತಿಭಾವಂತ ಮೆಡಿಕಲ್, ಎಂಜಿನಿಯರಿಂಗ್ ಹಾಗೂ ದ್ವಿತೀಯ ಪಿ.ಯು.ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಉಚಿತ ಸಿಇಟಿ ಹಾಗೂ ನೀಟ್‌ ಪರೀಕ್ಷೆಗಳ ತರಬೇತಿ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು.

ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಬಿವಿಪಿ ಇಂತಹ ಶಿಬಿರಗಳನ್ನು ಏರ್ಪಡಿಸಿರುವುದು ಶ್ಲಾಘನೀಯ. ಇದರಿಂದ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದಾರಿದೀಪವಾಗಲಿದ್ದು ಎಲ್ಲರೂ ಸದು‍‍ಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ADVERTISEMENT

ತುಮಕೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಸಿಬಂತಿ ಪದ್ಮನಾಭ ಮಾತನಾಡಿ, ‘ವಿದ್ಯಾರ್ಥಿಗಳ ಯಶಸ್ಸಿಗೆ ಈ ತರಬೇತಿ ಸಹಕಾರಿಯಾಗಲಿದೆ. ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ಹೆಚ್ಚು ಹಣ ಕೊಟ್ಟು ಸಿಇಟಿ ತರಬೇತಿ ಪಡೆಯಲು ಸಾಧ್ಯವಿಲ್ಲ. ಅಂತವರಿಗೆ ಈ ತರಬೇತಿ ಉತ್ತಮ ಮಾರ್ಗದರ್ಶನ’ ಎಂದು ಅಭಿಪ್ರಾಯಪಟ್ಟರು.

ಶಿಬಿರದಲ್ಲಿ ಸುಮಾರು 30 ಕ್ಕೂ ಹೆಚ್ಚು ಉಪನ್ಯಾಸಕರು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವೀಣಾ ಹಾಗೂ ವೇದಿಕೆ ಮೇಲೆ ಎಬಿವಿಪಿ ಕಾರ್ಯಕರ್ತರಾದ ಪ್ರೊ.ರವೀಂದ್ರ ಹಾಗೂ ನಂದೀಶ್, ಸಿದ್ದೇಶ್ ಹಾಗೂ ಜಗದೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.