ಕುಣಿಗಲ್: ಬಿಸಿಯೂಟ ನೌಕರರು ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ನಡೆಸುತ್ತಿದ್ದರೂ, ತಾಲ್ಲೂಕಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಬಿಸಿಯೂಟದ ವ್ಯವಸ್ಥೆ ಇದ್ದು, 12 ಸಾವಿರ ವಿದ್ಯಾರ್ಥಿಗಳು ಬಿಸಿಯೂಟ ಸವಿದಿದ್ದಾರೆ.
ಬಿಸಿಯೂಟ ನೌಕರರ ಮುಷ್ಕರದಲ್ಲಿ ಭಾಗಿಯಾಗಿರುವುದರಿಂದ ವಿದ್ಯಾರ್ಥಿಗಳಿಗೆ ಬಿಸಿಯೂಟ ತೊಂದರೆಯಾಗದಂತೆ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಸೇರಿದಂತೆ ಪೋಷಕರು, ಕೆಲ ಶಾಲೆಗಳಲ್ಲಿ ಆಯಾಗಳು, ಶಿಕ್ಷಕರು ಸೇರಿ ಬಿಸಿಯೂಟ ತಯಾರಿಸುತ್ತಿದ್ದಾರೆ. ಸರ್ಕಾರದ ಸೂಚನೆಯಂತೆ ಹಾಲು ಮತ್ತು ಬಿಸಿಯೂಟದ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮಾಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೋರೆಗೌಡ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.