ADVERTISEMENT

ಪಠ್ಯೇತರ ಚಟುವಟಿಕೆಗಳಿಂದ ಜ್ಞಾನ ವೃದ್ಧಿ: ಡಾ.ಕೆ.ಜಿ.ಸುರೇಶ್‌

ನಗರದ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2019, 15:14 IST
Last Updated 3 ಏಪ್ರಿಲ್ 2019, 15:14 IST
ಕಾರ್ಯಕ್ರಮದಲ್ಲಿ ಡಾ.ಕೆ.ಜಿ.ಸುರೇಶ್‌, ಡಾ.ಅಜಮತ್ ಉಲ್ಲಾ, ಕಾಲೇಜಿನ ಪ್ರಾಂಶುಪಾಲ ಎಚ್.ಎನ್.ವಿಜಯೇಂದ್ರ, ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ.ವೈ.ಎಂ.ರೆಡ್ಡಿ ಇದ್ದಾರೆ
ಕಾರ್ಯಕ್ರಮದಲ್ಲಿ ಡಾ.ಕೆ.ಜಿ.ಸುರೇಶ್‌, ಡಾ.ಅಜಮತ್ ಉಲ್ಲಾ, ಕಾಲೇಜಿನ ಪ್ರಾಂಶುಪಾಲ ಎಚ್.ಎನ್.ವಿಜಯೇಂದ್ರ, ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ.ವೈ.ಎಂ.ರೆಡ್ಡಿ ಇದ್ದಾರೆ   

ತುಮಕೂರು: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗುವುದರಿಂದ ತಮ್ಮ ಜ್ಞಾನಾರ್ಜನೆ ವೃದ್ಧಿಯಾಗುತ್ತದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವ ಡಾ.ಕೆ.ಜಿ.ಸುರೇಶ್‌ ತಿಳಿಸಿದರು.

ನಗರದ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಶೈಕ್ಷಣಿಕ ಸಾಲಿನ ಸಿದ್ಧಾರ್ಥ ಸಿರಿ ಸಂಭ್ರಮ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಎನ್‌ಎಸ್‌ಎಸ್‌, ಎನ್‌ಸಿಸಿ ಹಾಗೂ ರೆಡ್‌ಕ್ರಾಸ್‌ ವಿಜ್ಞಾನ ಸಂಘಗಳ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯಕರವಾಗಿರಲು ಸಾಧ್ಯ. ಈ ನಿಟ್ಟಿನಲ್ಲಿ ತಮ್ಮ ಕೊಡುಗೆಯನ್ನು ಸಮಾಜಕ್ಕೆ ಕೊಡಬೇಕು ಎಂದು ಹೇಳಿದರು.

ADVERTISEMENT

ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಎಂಬಿಎ ವಿಭಾಗದ ಪ್ರಾಂಶುಪಾಲ ಡಾ.ಅಜಮತ್ ಉಲ್ಲಾ ಮಾತನಾಡಿ, ‘ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನು ಹೊಂದಿರಬೇಕು. ಗುರಿ ಇದ್ದಲ್ಲಿ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ’ ಎಂದರು.

ನಂತರ ಸಾಂಸ್ಕೃತಿಕ ಸ್ಪರ್ಧೆಗಳು ಜರುಗಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.