ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಐದು ಗ್ರಾಮ ಪಂಚಾಯಿತಿಗಳಲ್ಲಿ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸಲು ಮಂಜೂರಾತಿ ನೀಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.
ಯಳನಡು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಕಚೇರಿ ಹಾಗೂ ಗೋದಾಮು ಕಟ್ಟಡವನ್ನು ಈಚೆಗೆ ಉದ್ಘಾಟಿಸಿ ಮಾತನಾಡಿದರು.
ಕೋರಗೆರೆ, ಬೆಳುಗುಲಿ, ತಿಮ್ಲಾಪುರ, ದೊಡ್ಡಬಿದರೆ ಹಾಗೂ ಮುದ್ದೇನಹಳ್ಳಿ ಗ್ರಾಮಗಳಲ್ಲಿ ಸಹಕಾರ ಸಂಘಗಳು ಸ್ಥಾಪನೆಯಾಗಲಿವೆ. ಖಾಸಗಿ ಕಂಪನಿಗಳಿಂದ ರೈತರಿಗೆ ಆಗುವ ಆರ್ಥಿಕ ಹೊರೆ ತಪ್ಪಿಸಲು 2004ರಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ ನೀಡುವ ಯೋಜನೆ ಜಾರಿಗೆ ತಂದರು. ಇದರಿಂದ ರೈತರಿಗೆ ಸಾಕಷ್ಟು ಪ್ರಯೋಜನವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜ್‌ಕುಮಾರ್, ವ್ಯವಸ್ಥಾಪಕ ಜಂಗಮಪ್ಪ, ಸಹಕಾರ ಸಂಘಗಳ ಉಪನಿಬಂಧಕ ಎಚ್.ಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂದಿನಿ, ಯಳನಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಮಲಿಂಗಯ್ಯ ಪಟೇಲ್, ಉಪಾಧ್ಯಕ್ಷೆ ಇಂದಿರಮ್ಮ, ನಿರ್ದೇಶಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.