
ತುಮಕೂರು: ಸಾಮಾಜಿಕ ಜಾಲ ತಾಣದ ಅತಿಯಾದ ಬಳಕೆಯಿಂದ ಸಂಬಂಧಗಳು ಕೊನೆಗೊಳ್ಳುತ್ತಿವೆ. ವಿಚ್ಛೇದನ ಪ್ರಕರಣಗಳು ಹೆಚ್ಚುತ್ತಿವೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಆತಂಕ ವ್ಯಕ್ತಪಡಿಸಿದರು.
ವಿಶ್ವವಿದ್ಯಾಲಯದಲ್ಲಿ ಶನಿವಾರ ಅಲ್ಪಸಂಖ್ಯಾತರ ಘಟಕದಿಂದ ಆಯೋಜಿಸಿದ್ದ ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ, ಕೌಶಲಾಭಿವೃದ್ಧಿ ಮತ್ತು ಕಲ್ಯಾಣ ಯೋಜನಾ ಅವಕಾಶಗಳು ಎಂಬ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಭಾವನೆಗಳಿಲ್ಲದ ಸಾಮಾಜಿಕ ಜಾಲ ತಾಣ ಬಿಟ್ಟು ತಂದೆ, ತಾಯಿಯ ಜತೆಗೆ ನಿಮ್ಮ ಭಾವನೆ ಹಂಚಿಕೊಳ್ಳಬೇಕು. ಶ್ರಮ ವಹಿಸಿ ಕೆಲಸ ಮಾಡಿದರೆ ಮೌಲ್ಯಯುತ ಜೀವನ ನಮ್ಮದಾಗುತ್ತದೆ. ಸಾವಿತ್ರಿಬಾಯಿ ಫುಲೆ ಅವರು ಅನೇಕ ಸವಾಲು ಎದುರಿಸಿ ಭಾರತದ ಮೊದಲ ಮಹಿಳಾ ಶಿಕ್ಷಕಿಯಾಗಿದ್ದಾರೆ. ಅವರು ನಮಗೆಲ್ಲರಿಗೂ ಆದರ್ಶ ಎಂದರು.
ವಿ.ವಿ ಕುಲಸಚಿವ ಪ್ರೊ.ಎಚ್.ಎಸ್.ಮೋಹನ್, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಬ್ಬೀರ್ ಅಹ್ಮದ್, ಅಲ್ಪಸಂಖ್ಯಾತ ಘಟಕದ ನಿರ್ದೇಶಕ ನೂರ್ ಅಫ್ಜಾ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.