ADVERTISEMENT

14 ರೌಡಿಗಳ ಗಡಿಪಾರು

ಒಟ್ಟು ₹1.20 ಕೋಟಿ ನಗದು ವಶ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 16:16 IST
Last Updated 29 ಮಾರ್ಚ್ 2023, 16:16 IST
ಆರ್‌.ಕೆ. ಶಹಾಪೂರವಾಡ
ಆರ್‌.ಕೆ. ಶಹಾಪೂರವಾಡ   

ತುಮಕೂರು: ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲೆಯಿಂದ 14 ರೌಡಿಗಳನ್ನು ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪೂರವಾಡ ತಿಳಿಸಿದರು.

14 ಮಂದಿ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮ ಕೈಗೊಂಡಿದ್ದು, ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಇನ್ನೂ 10 ಮಂದಿ ರೌಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಕ್ರಿಯೆ ಆರಂಭವಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಹೇಳಿದರು.

ಜಿಲ್ಲೆಯಲ್ಲಿ ಮಾರ್ಚ್ 16ರಿಂದ 29ರ ವರೆಗೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಟ್ಟು ₹1.20 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ₹1.99 ಲಕ್ಷ ಮೊತ್ತದ 17,726 ಲೀಟರ್ ಮದ್ಯ, ₹1.22 ಲಕ್ಷ ಬೆಲೆಯ 29.36 ಕೆ.ಜಿ ಡ್ರಗ್ಸ್, ₹49.73 ಲಕ್ಷ ಮೌಲ್ಯದ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.