ADVERTISEMENT

ಪತ್ರಕರ್ತರಿಗೆ ಸೌಲಭ್ಯ: ಶಾಸಕರ ಭರವಸೆ

ಶಾಸಕ ಮಸಾಲ ಜಯರಾಂ ಭರವಸೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2022, 5:46 IST
Last Updated 20 ಸೆಪ್ಟೆಂಬರ್ 2022, 5:46 IST
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುರುವೇಕೆರೆ ತಾಲ್ಲೂಕು ಘಟಕದಿಂದ ನಡೆದ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ನಿವೃತ್ತ ಪತ್ರಕರ್ತರನ್ನು ಸನ್ಮಾನಿಸಲಾಯಿತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುರುವೇಕೆರೆ ತಾಲ್ಲೂಕು ಘಟಕದಿಂದ ನಡೆದ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ನಿವೃತ್ತ ಪತ್ರಕರ್ತರನ್ನು ಸನ್ಮಾನಿಸಲಾಯಿತು   

ತುರುವೇಕೆರೆ: ‘ಗ್ರಾಮೀಣ ಪತ್ರಕರ್ತರಿಗೆ ಪಿಂಚಣಿ ಸೌಲಭ್ಯ ಸೇರಿದಂತೆ ಸೇವಾ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸದನದಲ್ಲಿ ಚರ್ಚಿಸುತ್ತೇನೆ’ ಎಂದು ಶಾಸಕ ಮಸಾಲ ಜಯರಾಂ ತಿಳಿಸಿದರು.

ಪಟ್ಟಣದ ಕನ್ನಡ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘದ ತಾಲ್ಲೂಕು ಘಟಕದಿಂದ ನಡೆದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

‘ಹಳ್ಳಿಗಾಡಿನ ಪತ್ರಕರ್ತರ ನೋವು-ನಲಿವುಗಳಿಗೆ ಸ್ಪಂದಿಸುವ ಕೆಲಸವನ್ನು ರಾಜಕಾರಣಿಗಳು ಮಾಡಬೇಕು. ಈ ಪತ್ರಕರ್ತರು ಯಾವುದೇ ಸಂಬಳವಿಲ್ಲದೆ ನಿಸ್ವಾರ್ಥ ಸೇವೆ ಮಾಡುತ್ತಾ ಸಮಾಜದ ಕನ್ನಡಿಯಾಗಿ ಕಾರ್ಯ ನಿರ್ವಹಿಸುತ್ತಾರೆ. ತಾಲ್ಲೂಕು ಪತ್ರಕರ್ತರ ಭವನ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ’ ಎಂದರು.

ADVERTISEMENT

ಸಂಘದ ಜಿಲ್ಲಾ ಅಧ್ಯಕ್ಷ ಚಿ.ನಿ. ಪುರುಷೋತ್ತಮ್ ಮಾತನಾಡಿದರು.

ನಿವೃತ್ತ ಪತ್ರಕರ್ತರಾದ ಕೃಷ್ಣಮೂರ್ತಿ, ಎಂ.ಡಿ. ಶಿವನಂಜಪ್ಪ, ಸತ್ಯನಾರಾಯಣ್, ನರಸಿಂಹಮೂರ್ತಿ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಆಶಾ ರಾಜಶೇಖರ್, ಕಸಾಪ ಅಧ್ಯಕ್ಷ ಡಿ.ಪಿ. ರಾಜು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಂ. ರಾಜು ಮುನಿಯೂರು, ಅಧ್ಯಕ್ಷ ಮಲ್ಲಿಕಾರ್ಜುನ, ಜಿಲ್ಲಾ ಘಟಕದ ನಿರ್ದೇಶಕ ಬೊಮ್ಮೇನಹಳ್ಳಿ ನಂದೀಶ್, ಮುಖಂಡರಾದ ಕೊಂಡಜ್ಜಿ ವಿಶ್ವನಾಥ್, ವಿ.ಬಿ. ಸುರೇಶ್, ಜಿಲ್ಲಾ ಘಟಕದ ನಿರ್ದೇಶಕರಾದ ಕೃಷ್ಣಮೂರ್ತಿ, ಮಂಜುನಾಥ್ ತಾಳಮಕ್ಕಿ, ಉಪಾಧ್ಯಕ್ಷ ದೇವರಾಜ್, ಪ್ರಧಾನ ಕಾರ್ಯದರ್ಶಿ ಹರೀಶ್ ಎಂ.ಬಿ. ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.