ಚಿಕ್ಕಬಳ್ಳಾಪುರ: ದೇಶದಲ್ಲೇ ಯುವ ಕಾಂಗ್ರೆಸ್ ಸಂಘಟನೆ ಬೇರೆ ಪಕ್ಷಗಳ ಸಂಘಟನೆಗಳಿಗಿಂತಲೂ ಮುಂಚೂಣಿಯಲ್ಲಿದೆ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಪ್ರದೇಶ ಯುವ ಕಾಂಗ್ರೆಸ್ ಉಸ್ತುವಾರಿ ಸುರಭಿ ದ್ವಿವೇದಿ ತಿಳಿಸಿದರು.
ನಗರದ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.
ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಪ್ರಧಾನ ಮಂತ್ರಿ ಇದುವರೆಗೂ ಕೊರೊನಾ ಹೆಚ್ಚುತ್ತಿರುವ ರಾಜ್ಯಗಳಿಗೆ ಭೇಟಿ ನೀಡಿ ಕೊರೊನಾ ತಡೆಯುವ ನಿಟ್ಟಿನಲ್ಲಿ ಮುಂದಾಗಲಿಲ್ಲ ಎಂದು ದೂರಿದರು.
ಕೇವಲ ಮಾಧ್ಯಮಗಳ ಮುಂದೆ ಸುಳ್ಳು ಭರವಸೆ ನೀಡಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ₹ 20 ಲಕ್ಷ ಕೋಟಿ ಹುಸಿ ಪ್ಯಾಕೇಜ್ ಘೋಷಿಸಿರುವುದು ಇವರ ಸಾಧನೆ. ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯಬೇಕಾದ ಸಚಿವರೇ ಸಾವಿರಾರು ಕೋಟಿ ಲೂಟಿ ಮಾಡಿದ್ದಾರೆ. ಇದನ್ನು ದಾಖಲೆ ಸಮೇತ ನಮ್ಮ ನಾಯಕರು ಬಿಡುಗಡೆ ಮಾಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನರೇಂದ್ರ, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಭವ್ಯ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಲೋಕೇಶ್ ಮತ್ತು ತ್ರಿಭುವನ್ ಗೌಡ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ್, ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುಬೇರ್ ಅಚ್ಚು, ಜೈಭೀಮ್ ಮುರಳಿ, ಅಶೋಕ್, ಮೂರ್ತಿ, ಮಂಜುನಾಥ್, ನಗರಸಭೆ ಸದಸ್ಯರಾದ ರಮೇಶ್, ಶ್ರೀನಾಥ್, ಎನ್ ಎಸ್ ಯು ಐ ಉಪಾಧ್ಯಕ್ಷ ಷಾಹಿದ್ ಅಬ್ಬಾಸ್, ಯುವ ಕಾಂಗ್ರೆಸ್ ಮುಖಂಡರಾದ ನಾಗೇಶ್,ನರೇಶ್ ಚಂಟಿ, ಮುರಳಿ, ಸುದರ್ಶನ್, ಅರುಣ್, ತೇಜಸ್, ಶಶಿ ಕುಮಾರ್, ಧನು, ವಿಶ್ವನಾಥ್, ಅಲ್ಲು ಅನಿಲ್, ಮಧು ಮುಂತಾದವರು ಭಾಗವಹಿಸಿದ್ದರು.
ಎತ್ತಿ ತೋರುತ್ತಿದೆ ಬಿಜೆಪಿ ಭ್ರಷ್ಟಾಚಾರ
ಬಿಜೆಪಿ ಮಾಜಿ ಶಾಸಕ ಸಾರ್ವಭೌಮ ಬಗಲಿ ಲೋಕಾಯುಕ್ತಕ್ಕೆ ತಮ್ಮ ಪಕ್ಷದ ಸಚಿವರ ಮೇಲೆ ದೂರು ನೀಡಿದ್ದಾರೆ. ಇದು ಬಿಜೆಪಿಯ ಭ್ರಷ್ಟಾಚಾರವನ್ನು ಎತ್ತಿ ತೋರುತ್ತದೆ. ಕೊರೊನಾ ತಡೆಗಟ್ಟುವ ಹೋರಾಟದಲ್ಲಿ ವಿಫಲವಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಜನರು ಪಾಠ ಕಲಿಸುವರು ಎಂದು ಸುರಭಿ ದ್ವಿವೇದಿ ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.