ADVERTISEMENT

ತುಮಕೂರು: ಜಿಲ್ಲಾಧಿಕಾರಿ ಕಚೇರಿಯಲ್ಲಿ ತಹಶೀಲ್ದಾರ್ ಕಾಲಿಗೆ ಬಿದ್ದ ರೈತ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2022, 6:34 IST
Last Updated 10 ಏಪ್ರಿಲ್ 2022, 6:34 IST
   

ತುಮಕೂರು: ರೈತರೊಬ್ಬರು ಸರ್ಕಾರದ ಸೇವೆಗಾಗಿ ತಹಶೀಲ್ದಾರ್ ಕಾಲು ಹಿಡಿದು ಗೋಗರೆದ ಘಟನೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇತ್ತೀಚಿಗೆ ನಡೆದಿದ್ದು, ಇದರ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ತಾಲ್ಲೂಕಿನ ನಾಗವಲ್ಲಿಯ ರೈತ ಮುನಿಯಪ್ಪ ಹಲವು ವರ್ಷಗಳಿಂದ ಅನುಭವದಲ್ಲಿದ್ದ ಜಮೀನಿಗೆ ಸಾಗುವಳಿ ಪತ್ರ ಪಡೆದಿದ್ದರು. ಆ ಸಾಗುವಳಿ ಪತ್ರದಲ್ಲಿನ ದೋಷಗಳನ್ನು ಸರಿಪಡಿಸುವಂತೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದರು.

ತಾಲ್ಲೂಕು ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮುನಿಯಪ್ಪ ಅವರ ಸಮಸ್ಯೆಗೆ ಸ್ಪಂದಿಸಿದೆ ನಿರ್ಲಕ್ಷ್ಯ ವಹಿಸಿದ್ದರು. ಹೇಗಾದರೂ ಮಾಡಿ ತನಗೆ ನ್ಯಾಯ ಕೊಡಿಸುವಂತೆ ತಹಶೀಲ್ದಾರ್ ಕಾಲಿಗೆ ಬಿದ್ದು ಅಂಗಲಾಚಿದ್ದಾರೆ.

ADVERTISEMENT

ಸದ್ಯ ಎಲ್ಲ ಕಡೆ ಈ ದೃಶ್ಯ ಹರಿದಾಡುತ್ತಿದ್ದು, ಅಧಿಕಾರಿಗಳ ಕಾರ್ಯವೈಖರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.