ಕೊಡಿಗೇನಹಳ್ಳಿ: ಹೋಬಳಿಯ ಸಿಂಗನಹಳ್ಳಿ ಗ್ರಾಮದ ರೈತ ರಂಗನಾಥ (43) ಭಾನುವಾರ ಮಧ್ಯಾಹ್ನ ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾರೆ.
ರಂಗನಾಥ ಅವರು ಮಗ ಧನುಶ್ ಜತೆ ಸಿಂಗನಹಳ್ಳಿ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಾರೆ. ರಂಗನಾಥ ಮೀನು ಹಿಡಿಯುವ ಸಂದರ್ಭದಲ್ಲಿ ಕಾಲು ಜಾರಿ ಆಳವಾದ ಗುಂಡಿಯಲ್ಲಿ ಬಿದ್ದಿದ್ದಾರೆ. ಈಜು ಬಾರದ ಧನುಶ್ ತನ್ನ ತಂದೆ ನೀರಿನಲ್ಲಿ ಮುಳುಗುತ್ತಿದ್ದುದ್ದನ್ನು ಗಮನಿಸಿ ತಂದೆಯ ರಕ್ಷಣೆಗಾಗಿ ಕೂಗಿ ಸಮೀಪದಲ್ಲಿದ್ದವರನ್ನು ಕರೆದುಕೊಂಡು ಬಂದಿದ್ದಾನೆ.
ಸ್ಥಳೀಯರು ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಕರೆಸಿ ಹುಡುಕಾಟ ನಡೆಸಿದರು. ಹಲವು ಗಂಟೆ ಹುಡುಕಾಟ ನಡೆಸಿದ ನಂತರ ಮೃತದೇಹ ದೊರಕಿತು. ವಿಷಯ ತಿಳಿದ ಸುತ್ತಮುತ್ತಲಿನ ಹಲವು ಗ್ರಾಮಗಳ ಜನರು ಕೆರೆ ಬಳಿ ಜಮಾಯಿಸಿದ್ದರು. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.