ಶಿರಾ: ತಾಲ್ಲೂಕಿನ ಯಲಪೇನಹಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತ ತಿಮ್ಮಣ್ಣ (60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಿಮ್ಮಣ್ಣ ಅವರಿಗೆ 3 ಎಕರೆ ಜಮೀನಿದೆ. ವ್ಯವಸಾಯಕ್ಕಾಗಿ ಬರಗೂರು ಗ್ರಾಮದ ಕೆನರಾ ಬ್ಯಾಂಕ್ ಹಾಗೂ ವಿಎಸ್ಎಸ್ಎನ್‌ನಲ್ಲಿ ಸಾಲ ಮಾಡಿದ್ದಾರೆ. ಭಾನುವಾರ ಬೆಳಿಗ್ಗೆ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಪಟ್ಟನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.