ಪಾವಗಡ: ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದು, ರೈತರು ಪ್ರತಿಭಟನೆ ಕೈಬಿಟ್ಟ ಹಿನ್ನಲೆಯಲ್ಲಿ ರೈತ ಸಂಘ, ಪ್ರಗತಿಪರ ಸಂಘಟನೆ ಪದಾಧಿಕಾರಿಗಳು ಶನಿವಾರ ಪಟ್ಟಣದ ಅಂಬೇಡ್ಕರ್ ವಿಗ್ರಹಕ್ಕೆ ಮಾಲಾರ್ಪಣೆ ಮಾಡಿ ವಿಜಯೋತ್ಸವ ಆಚರಿಸಿದರು.
ಪ್ರಗತಿಪರ ವೇದಿಕೆ ಮುಖಂಡ ರಾಮಾಂಜಿನಪ್ಪ ಮಾತನಾಡಿ, ಕೇಂದ್ರ ಸರ್ಕಾರ ರೈತರ ಮೇಲೆ ಬಲವಂತವಾಗಿ ಹೇರಲು ಹೊರಟಿದ್ದ ಕೃಷಿ ಕಾಯ್ದೆ ಹಿಂಪಡೆದಿರುವುದು ರೈತರ ಹೋರಾಟಕ್ಕೆ ಸಿಕ್ಕ ಜಯ ಎಂದರು.
ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ ಮಾತನಾಢಿ, ವರ್ಷದಿಂದ ದೆಹಲಿಯಲ್ಲಿ ಬೃಹತ್ ಚಳವಳಿ ಹಮ್ಮಿಕೊಂಡು, ಸುಮಾರು 700 ರೈತರು ಬಲಿದಾನ ಮಾಡಿದ್ದಾರೆ. ಇವರ ತ್ಯಾಗದ ಫಲವಾಗಿ ಕೇಂದ್ರ ಸರ್ಕಾರ ಕೃಷಿ ಕಾಯ್ದೆ ಹಿಂಪಡೆದಿದೆ. ವಿಶ್ವದ ಹಸವು ತಣಿಸುವ ರೈತರ ಬಗ್ಗೆ ಸರ್ಕಾರಗಳು ತಾತ್ಸಾರ ಮಾಡಬಾರದು. ರೈತ ವಿರೋಧಿ ಕಾಯ್ದೆ ಜಾರಿ ಮಾಡುವ ಮುನ್ನ ಎಚ್ಚರಿಕೆಯಿಂದ ಇರಬೇಕು ಎನ್ನುವುದನ್ನು ಈ ಹೋರಾಟ ತಿಳಿಸಿಕೊಟ್ಟಿದೆ ಎಂದರು.
ಮುಖಂಡ ಕೃಷ್ಣಮೂರ್ತಿ, ಮಂಜುನಾಥ್, ಸತ್ಯಲೋಕೇಶ್, ನೇರಳೆಕುಂಟೆ ನಾಗೇಂದ್ರ ಕುಮಾರ್ ಅಭಿಮಾನಿ ಬಳಗದ ಕಿರಣ್ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.