ADVERTISEMENT

ನಷ್ಟ ಪರಿಹಾರಕ್ಕೆ ರೈತರ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಜೂನ್ 2021, 4:51 IST
Last Updated 18 ಜೂನ್ 2021, 4:51 IST
ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಪ್ರತಿಭಟಿಸಿದರು
ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಪ್ರತಿಭಟಿಸಿದರು   

ತುಮಕೂರು: ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಬೆಳೆದ ಬೆಳೆಯನ್ನುಮಾರುಕಟ್ಟೆಗೆ ಸಾಗಿಸಿ, ಮಾರಾಟ ಮಾಡಲು ಸಾಧ್ಯವಾಗದೆ ಅನುಭವಿ
ಸಿರುವ ನಷ್ಟವನ್ನು ಅಂದಾಜಿಸಲು ಸಮಿತಿ ರಚಿಸಬೇಕು. ಸೂಕ್ತ ಪ್ರಮಾಣದಲ್ಲಿ ನಷ್ಟ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ಕೊರೊನಾ ಸೋಂಕಿನಿಂದ ಮೃತಪಟ್ಟ ರೈತ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡಬೇಕು ಎಂದು
ಜಿಲ್ಲಾಧಿಕಾರಿ ಕಚೇರಿ ಎದುರು ಗುರು
ವಾರ ನಡೆಸಿದ ಪ್ರತಿಭಟನೆಯಲ್ಲಿ ಒತ್ತಾಯಿ
ಸಿದರು. ಸರ್ಕಾರದ ರೈತರ ವಿರೋಧಿ ಧೋರಣೆ ಖಂಡಿಸಿ ಘೋಷಣೆ ಕೂಗಿದರು.

‘ಕೋವಿಡ್‌ ಲಾಕ್‍ಡೌನ್ ಸಮಯ
ದಲ್ಲಿ ಸಾವಿರಾರು ಎಕರೆಯಲ್ಲಿ ಬೆಳೆ
ದಿದ್ದ ಹಣ್ಣು, ತರಕಾರಿ, ಇನ್ನಿತರ ಕೃಷಿ
ಉತ್ಪನ್ನಗಳನ್ನು ಮಾರುಕಟ್ಟೆಗೆ ತರಲಾ
ಗದೆ ಸುಮಾರು ₹1 ಲಕ್ಷ ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ. ಆದರೆ ರಾಜ್ಯ ಸರ್ಕಾರ ಹೆಕ್ಟೇರ್‌ಗೆ ₹3,500 ಭಿಕ್ಷೆಯ ರೀತಿಯಲ್ಲಿ ಪರಿಹಾರ ಘೋಷಿಸಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಕೋವಿಡ್ ಎರಡನೇ ಅಲೆಯ ಬಗ್ಗೆ ತಜ್ಞರು ನೀಡಿದ್ದ ವರದಿಯನ್ನು ನಿರ್ಲಕ್ಷ್ಯಿಸಿ ಚುನಾವಣೆಗಳು,ಕುಂಭಮೇಳ ನಡೆಸಿದ್ದರ ಪರಿಣಾಮ ದೇಶದಾದ್ಯಂತ ಲಕ್ಷಾಂತರ ಜನರು ಬಲಿಯಾದರು. ಈ ಎಲ್ಲರ ಸಾವಿಗೆ ಸರ್ಕಾರವೇ ನೇರ ಹೊಣೆ. ಕೊಂಚ ಮಾನವೀಯತೆ ಇದ್ದರೂ ಸಾವನ್ನಪ್ಪಿರುವ ಎಲ್ಲಾ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಬೇಕಿತ್ತು. ಕೋವಿಡ್ ಮೂರನೇ ಅಲೆ ಕಾಣಿಸಿಕೊಳ್ಳುವ ಬಗ್ಗೆ ತಜ್ಞರು ಈಗಾಗಲೇ ಎಚ್ಚರಿಸಿದ್ದು, ಗ್ರಾಮೀಣ ಭಾಗದಲ್ಲಿ ಕೊರೊನಾ ಪರೀಕ್ಷೆ ವ್ಯಾಪಕಗೊಳಿಸಬೇಕು. ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಲಸಿಕೆ ಹಾಕಬೇಕು ಎಂದು ಆಗ್ರಹಿಸಿದರು.

ಜನಸಾಮಾನ್ಯರು ಕೆಲಸವಿಲ್ಲದೆ, ಒಂದು ಹೊತ್ತಿನ ಊಟಕ್ಕೂ ಪರದಾಡು
ತ್ತಿದ್ದು, ರೈತರು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲಾಗದೆ ಪರಿತಪಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಇಂಧನ ಬೆಲೆ ಹೆಚ್ಚಳ ಮಾಡಿ, ಸಂಕಷ್ಟಕ್ಕೆ ದೂಡಿದೆ. ಕೃಷಿಗೆ ಬಳಸುವ ರಸಗೊಬ್ಬರ, ಔಷಧ, ಕ್ರಿಮಿನಾಶಕ, ಪರಿಕರಗಳ ಬೆಲೆ ಹೆಚ್ಚಳವಾಗಿದೆ. ತಕ್ಷಣ ತೈಲ ಬೆಲೆ ಇಳಿಸಬೇಕು ಎಂದು ಒತ್ತಾಯಿಸಿದರು.

ಉಚಿತವಾಗಿ ಬಿತ್ತನೆ ಬೀಜ ಕೊಡಬೇಕು. ರಸಗೊಬ್ಬರ, ಕ್ರಿಮಿನಾಶಕ
ಗಳನ್ನು ರಿಯಾಯಿತಿ ದರದಲ್ಲಿ ಒದಗಿಸ
ಬೇಕು. ಕೇಂದ್ರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿದ್ದ ಪ್ರಕಾಶ್ ಕಮ್ಮರಡಿ ಅವರು ನೀಡಿರುವ ವರದಿ ಅನ್ವಯ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ನೀಡಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ಮುಖಂಡರಾದ ಜಿ.ಶಂಕರಪ್ಪ, ಕೆ.ಎನ್.ವೆಂಕಟೇಗೌಡ, ಸಿ.ಜಿ.ಲೋಕೇಶ್, ಶ್ರೀನಿವಾಸ್, ಲಕ್ಷ್ಮಣಗೌಡ, ರಂಗಹನುಮಯ್ಯ, ಮಹಮದ್ ಶಬ್ಬೀರ್, ಕೆಂಚಪ್ಪ, ಶಿವರಾಜು, ಕೆ.ಎಸ್.ಜಯಮ್ಮ, ಎ.ಜಿ.ಮಂಜುನಾಥ್ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.