ADVERTISEMENT

ಚಿರತೆ ದಾಳಿ -ಭಯದ ಬೀತಿಯಲ್ಲಿ ರೈತರು

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2019, 9:50 IST
Last Updated 25 ಅಕ್ಟೋಬರ್ 2019, 9:50 IST
ಚಿರತೆ ದಾಳಿಗೆ ಬಲಿಯಾದ ಕುರಿಯನ್ನು ಸಬ್ ಇನ್‌ಸ್ಪೆಕ್ಟರ್ ಸುಂದರ್ ಪರಿಶೀಲಿಸಿದರು
ಚಿರತೆ ದಾಳಿಗೆ ಬಲಿಯಾದ ಕುರಿಯನ್ನು ಸಬ್ ಇನ್‌ಸ್ಪೆಕ್ಟರ್ ಸುಂದರ್ ಪರಿಶೀಲಿಸಿದರು   

ಹೆಬ್ಬೂರು: ಇಲ್ಲಿಗೆ ಸಮೀಪದದೊಮ್ಮನಕುಪ್ಪೆ ಗ್ರಾಮದಲ್ಲಿ ಹುಚ್ಚಪ್ಪ ಅವರ ಹೊಲದಲ್ಲಿ ಮೇಯುತ್ತಿದ್ದ ಕುರಿ ಮೇಲೆ ಚಿರತೆ ದಾಳಿ ಮಾಡಿದೆ.

ಇದರಿಂದ ಗ್ರಾಮಸ್ಥರು, ರೈತರು ಭಯಪಟ್ಟಿದ್ದಾರೆ. ಚಿರತೆ ದಾಳಿ ನಡೆಸಿದ ವಿಷಯ ತಿಳಿದು ಸ್ಥಳಕ್ಕೆ ಹೆಬ್ಬೂರು ಠಾಣೆ ಸಬ್ ಇನ್‌ಸ್ಪೆಕ್ಟರ್ ಸುಂದರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿರತೆ ದಾಳಿಗೆ ಬಲಿಯಾದ ಕುರಿಯ ಕಳೇಬರ ವೀಕ್ಷಿಸಿದರು.

ಚಿರತೆ ಹಾವಳಿ ಹೆಚ್ಚಾಗಿದ್ದು, ಮನುಷ್ಯರು, ಪ್ರಾಣಿಗಳ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಚಿರತೆ ಹಿಡಿಯಲು ಅರಣ್ಯ ಇಲಾಖೆ ಏನೂ ಕ್ರಮ ಕೈಗೊಂಡಿಲ್ಲ. ಕಳೆದ ವಾರವಷ್ಟೇ ಬನ್ನಿಕುಪ್ಪೆಯಲ್ಲಿ ಚಿರತೆ ವೃದ್ಧೆ ಮೇಲೆ ದಾಳಿ ನಡೆಸಿತ್ತು. ಈಗ ಕುರಿ ಮೇಲೆ ದಾಳಿ ನಡೆಸಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.