ADVERTISEMENT

ರೈತರ ಬೇಡಿಕೆ ಈಡೇರಿಸಿ: ರಾಷ್ಟ್ರೀಯ ಕಿಸಾನ್ ಸಂಘದ ಆಗ್ರಹ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2020, 4:08 IST
Last Updated 11 ಆಗಸ್ಟ್ 2020, 4:08 IST
ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಪಾವಗಡದಲ್ಲಿ ಸೋಮವಾರ ಅಖಿಲ ಭಾರತ ರಾಷ್ಟ್ರೀಯ ಕಿಸಾನ್ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ವರದರಾಜು ಅವರಿಗೆ ಮನವಿ ಸಲ್ಲಿಸಿದರು
ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಪಾವಗಡದಲ್ಲಿ ಸೋಮವಾರ ಅಖಿಲ ಭಾರತ ರಾಷ್ಟ್ರೀಯ ಕಿಸಾನ್ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ವರದರಾಜು ಅವರಿಗೆ ಮನವಿ ಸಲ್ಲಿಸಿದರು   

ಪಾವಗಡ: ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರಾಷ್ಟ್ರೀಯ ಕಿಸಾನ್ ಸಂಘದ ನೇತೃತ್ವದಲ್ಲಿ ಸೋಮವಾರ ರೈತರು ತಹಶೀಲ್ದಾರ್ ವರದರಾಜು ಅವರಿಗೆ ಮನವಿ ಸಲ್ಲಿಸಿದರು.

ಕೋವಿಡ್– 19 ಸಂದಿಗ್ಧ ಸ್ಥಿತಿಯಲ್ಲಿಯೂ ರೈತರು ತಮ್ಮ ಕಾಯಕದಲ್ಲಿ ತೊಡಗಿದ್ದಾರೆ. ದೇಶದ ಜನತೆಗೆ ಆಹಾರ ಧಾನ್ಯಗಳನ್ನು ಬೆಳೆದುಕೊಡುತ್ತಿದ್ದಾರೆ. ಆದರೆ, ಕೇಂದ್ರ, ರಾಜ್ಯ ಸರ್ಕಾರಗಳು ರೈತರಿಗೆ ಸಹಕಾರ ನೀಡುವ ಬದಲಿಗೆ, ರೈತ ವಿರೋಧಿ ಕಾಯ್ದೆ, ತಿದ್ದುಪಡಿಗಳನ್ನು ಜಾರಿಗಳಿಸುತ್ತಿರುವುದು ಖಂಡನೀಯ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.

ಅಖಿಲ ಭಾರತ ರಾಷ್ಟ್ರೀಯ ಕಿಸಾನ್ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಎಸ್.ರಾಮಕೃಷ್ಣ, ಅಂಜಿನಪ್ಪ, ರಾಮಾಂಜಿ, ಮೊದಲೇಟಿ, ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.