ADVERTISEMENT

ತುಮಕೂರು: ರೈತರಿಂದ ಹೆದ್ದಾರಿ ತಡೆ ಚಳವಳಿ; ಹಲವರ ಬಂಧನ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 7:26 IST
Last Updated 5 ನವೆಂಬರ್ 2020, 7:26 IST
ಪ್ರತಿಭಟನಾನಿರತ ರೈತರನ್ನು ಬಂಧಿಸಲಾಯಿತು.
ಪ್ರತಿಭಟನಾನಿರತ ರೈತರನ್ನು ಬಂಧಿಸಲಾಯಿತು.   

ತುಮಕೂರು: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಆಕ್ರೋಶ ವ್ಯಕ್ತಪಡಿಸಿ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಮಿಕ‌ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ನಗರದ ಹೊರವರವಲಯದ ಜಾಸ್ ಟೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ತಡೆಗೆ ಮುಂದಾಗಿದ್ದ ಅಖಿಲ ಭಾರತ ರೈತ ಸಂಪರ್ಕ ಸಮನ್ವಯ ಸಮಿತಿ, ರೈತ ಸಂಘ, ಹಸಿರು ಸೇನೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆನಂದ್ ಪಟೇಲ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ತಿದ್ದುಪಡಿ ಮಸೂದೆಗಳು ರೈತರಿಗೆ ಮರಣ ಶಾಸನವಾಗಿವೆ. ರೈತರ ಬದುಕು ಬೀದಿಗೆ ಬೀಳಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಹೋರಾಟಗಾರರಾದ ಸಿ.ಯತಿರಾಜು, ಬಿ.ಉಮೇಶ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.