ADVERTISEMENT

ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ: 15 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 4:32 IST
Last Updated 23 ಅಕ್ಟೋಬರ್ 2024, 4:32 IST
<div class="paragraphs"><p>ಜೈಲು (ಪ್ರಾತಿನಿಧಿಕ ಚಿತ್ರ)</p></div>

ಜೈಲು (ಪ್ರಾತಿನಿಧಿಕ ಚಿತ್ರ)

   

ತುಮಕೂರು: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರವೆಸಗಿ, ಆಕೆ ಗರ್ಭಿಣಿಯಾಗಲು ಕಾರಣವಾಗಿದ್ದ ತಿಮ್ಮಪ್ಪ (65) ಎಂಬಾತನಿಗೆ ಮಧುಗಿರಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 15 ವರ್ಷ ಶಿಕ್ಷೆ, ₹1 ಲಕ್ಷ ದಂಡ ವಿಧಿಸಿದೆ.

ಸರಿಯಾಗಿ ಮಾತನಾಡಲು ಬಾರದ, ಸದಾ ಮನೆಯಲ್ಲಿ ಇರುತ್ತಿದ್ದ ಬುದ್ಧಿಮಾಂದ್ಯ ಮಹಿಳೆ ಮೇಲೆ 2021ರ ಸೆ. 6ರಂದು ತಿಮ್ಮಪ್ಪ ಅತ್ಯಾಚಾರ ವೆಸಗಿದ್ದನು. ಬಡವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್‌ ಎಚ್‌.ಜಿ.ಹನುಮಂತರಾಯಪ್ಪ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.

4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಯಾದವ ಕರಕೇರ ಮಂಗಳವಾರ ವಿಚಾರಣೆ ನಡೆಸಿ ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ದಂಡದ ಹಣ ಹಾಗೂ ಹೆಚ್ಚುವರಿ ಹಣವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಬಿ.ಎಂ.ನಿರಂಜನಮೂರ್ತಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.