ತುಮಕೂರು: ಮಂಡ್ಯದ ಮದ್ದೂರಿನ ನಂತರ ತುಮಕೂರಿನಲ್ಲೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪ್ರಕರಣ ದಾಖಲಾಗಿದೆ.
ಶನಿವಾರ ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಯತ್ನಾಳ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು.
‘ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ಮಾತನಾಡಿದ್ದಾರೆ’ ಎಂದು ಪೊಲೀಸ್ ಸಿಬ್ಬಂದಿ ಎಸ್.ಆರ್.ರಘು ದೂರು ನೀಡಿದ್ದರು.
‘ಮದ್ದೂರಿನಲ್ಲಿ ನನ್ನ ವಿರುದ್ಧ 70ನೇ ಪ್ರಕರಣ ದಾಖಲಿಸಿದ್ದಾರೆ. ತುಮಕೂರಿನಲ್ಲಿ 71ನೇ ಪ್ರಕರಣ ದಾಖಲಾಗಬಹುದು’ ಎಂದು ಯತ್ನಾಳ ಶನಿವಾರ ಭಾಷಣದಲ್ಲಿಯೇ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.