ADVERTISEMENT

ಕೋವಿಡ್‌ಗೆ ಈ ವರ್ಷ ತುಮಕೂರು ಜಿಲ್ಲೆಯಲ್ಲಿ ಮೊದಲ ಸಾವು

ಹೆಚ್ಚಿದ ಕೋವಿಡ್ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2023, 14:53 IST
Last Updated 18 ಏಪ್ರಿಲ್ 2023, 14:53 IST

ತುಮಕೂರು: ಈ ವರ್ಷದಲ್ಲಿ ಕೋವಿಡ್‌ಗೆ ಮೊದಲ ಸಾವು ಸಂಭವಿಸಿದ್ದು, ಮಂಗಳವಾರ ಕೋವಿಡ್‌ ಸೋಂಕಿತ ಮಧುಗಿರಿಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ 2022ರ ಮಾರ್ಚ್‌ 4ರಂದು ಕೋವಿಡ್‌ನಿಂದಾಗಿ ಕೊನೆಯ ಸಾವು ಸಂಭವಿಸಿತ್ತು. ಇದಾದ ಒಂದು ವರ್ಷದ ನಂತರ ಕೋವಿಡ್‌ ಸೋಂಕಿನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮಂಗಳವಾರ 3 ಹೊಸ ಪ್ರಕರಣ ದಾಖಲಾಗಿದ್ದು, ಸದ್ಯ 20 ಸಕ್ರಿಯ ಪ್ರಕರಣಗಳಿವೆ.

ಶಿರಾದಲ್ಲಿ 16, ಚಿಕ್ಕನಾಯಕನಹಳ್ಳಿ, ಗುಬ್ಬಿ, ಮಧುಗಿರಿ, ತಿಪಟೂರು ತಾಲ್ಲೂಕಿನಲ್ಲಿ ತಲಾ ಒಂದು ಸಕ್ರಿಯ ಪ್ರಕರಣಗಳು ದಾಖಲಾಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.