ADVERTISEMENT

ಹಾಸನದಲ್ಲಿ ನರೇಗಾ ಯಶಸ್ವಿ; ಸಚಿವ ಮಾಧುಸ್ವಾಮಿ ಪ್ರಶಂಸೆ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2019, 10:01 IST
Last Updated 25 ಅಕ್ಟೋಬರ್ 2019, 10:01 IST
ಜೆ.ಸಿ.ಮಾಧುಸ್ವಾಮಿ
ಜೆ.ಸಿ.ಮಾಧುಸ್ವಾಮಿ   

ತುಮಕೂರು: ‘ನೆರೆಯ ಹಾಸನ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು (ನರೇಗಾ) ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಆದರೆ, ನಮ್ಮ ತುಮಕೂರು ಜಿಲ್ಲೆಯಲ್ಲಿ ಸಾಧನೆ ತೃಪ್ತಿಕರವಾಗಿಲ್ಲ' ಎಂದು ಹಾಸನ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಜೆ.ಸಿ.ಮಾಧುಸ್ವಾಮಿ ಬೇಸರವ್ಯಕ್ತಪಡಿಸಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನರೇಗಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಹಾಸನದಲ್ಲಿ ನರೇಗಾ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದನ್ನು ಪ್ರಶಂಸಿಸಿದ ಸಚಿವರು, ಜಿಲ್ಲೆಯಲ್ಲಿ ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಮಾದರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.