ಹುಳಿಯಾರು: ಪಟ್ಟಣದಲ್ಲಿ ವಿವಿಧ ಮಹಿಳಾ ಸಂಘಟನೆಗಳಿಂದ ದೇವನಹಳ್ಳಿ, ಚನ್ನರಾಯಪಟ್ಟಣ ತಾಲ್ಲೂಕಿನ 13 ಹಳ್ಳಿಗಳ ರೈತರ ಕೃಷಿ ಭೂಮಿಯನ್ನು ರಾಜ್ಯ ಸರ್ಕಾರ ಸ್ವಾಧೀನ ಪಡಿಸಿಕೊಳ್ಳುತ್ತಿರುವುದನ್ನು ವಿರೋಧಿಸಿ ನಡೆಸುತ್ತಿರುವ ಹೋರಾಟ ಬೆಂಬಲಿಸಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಸುವರ್ಣ ವಿದ್ಯಾ ಚೇತನ ಅಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ, ಅನ್ನ ಬೆಳೆವ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಬಾರದು. ಭೂಮಿ ವಶಪಡಿಸಿಕೊಂಡರೆ ರೈತರು ಬೀದಿಗೆ ಬರುತ್ತಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ತಿನ್ನುವ ಅನ್ನಕ್ಕೆ ಬರ ಬರಬಹುದು ಎಂದರು.
ಸೃಜನ ಮಹಿಳಾ ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷೆ ಎನ್.ಇಂದಿರಮ್ಮ ಮಾತನಾಡಿ, ಹೋರಾಟ ನಿರತರನ್ನು ಪಶುಗಳಂತೆ ಎಳೆದಾಡಿದ್ದು ಖಂಡನೀಯ. ಇದೊಂದು ಅಮಾನವೀಯ ಘಟನೆ ಎಂದರು.
ಮಹಿಳಾ ಸಂಘಟನೆ ಪದಾಧಿಕಾರಿಗಳು ಉಪ ತಹಶೀಲ್ದಾರ್ ವಿನುತಾ ಅವರ ಮೂಲಕ ಭೂಸ್ವಾಧೀನ ಕೈಬಿಡುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.
ನಿರಾಶ್ರಿತ ಮಹಿಳಾ ಸಂಘಟನೆ ಅಧ್ಯಕ್ಷೆ ಜಯಲಕ್ಷ್ಮಮ್ಮ, ತಾಲ್ಲೂಕು ಸಿಐಟಿಯು ಘಟಕದ ಅಧ್ಯಕ್ಷೆ ಪೂರ್ಣಮ್ಮ ಮಾತನಾಡಿದರು. ಸರಸ್ವತಿ, ಮಮತಾ, ಜರೀನಾ, ವಸಂತಲಕ್ಷ್ಮಿ, ದೇವರಾಜಮ್ಮ, ದುರ್ಗಮ್ಮ, ಅಲೆಮಾರಿ ಸಂಘಟನೆ ಲಕ್ಷ್ಮಿ, ಮಾಲಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.