ADVERTISEMENT

‘ಜಗಜೀವನರಾಮ್‘ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2019, 16:09 IST
Last Updated 6 ಫೆಬ್ರುವರಿ 2019, 16:09 IST
ಬಾಬು ಜಗಜೀವನರಾಮ್ ಭವನ ನಿರ್ಮಾಣಕ್ಕೆ ಶಮೀಮ್‌ ಉನ್ನೀಸಾ ಶಂಕು ಸ್ಥಾಪನೆ ನೆರವೇರಿಸಿದರು.
ಬಾಬು ಜಗಜೀವನರಾಮ್ ಭವನ ನಿರ್ಮಾಣಕ್ಕೆ ಶಮೀಮ್‌ ಉನ್ನೀಸಾ ಶಂಕು ಸ್ಥಾಪನೆ ನೆರವೇರಿಸಿದರು.   

ತುಮಕೂರು: ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಡಾ.ಬಾಬು ಜಗಜೀವನರಾಮ್ ಭವನ ನಿರ್ಮಾಣಕ್ಕೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಶಮೀಮ್‌ಉನ್ನೀಸಾ ಶಂಕು ಸ್ಥಾಪನೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಜಿಲ್ಲಾಧಿಕಾರಿ ಅವರು 1.12 ಎಕರೆ ಜಾಗವನ್ನು ಮಂಜೂರು ಮಾಡಿದ್ದು ಸರ್ಕಾರದಿಂದ ₹ 2 ಕೋಟಿ ಮಂಜೂರಾಗಿದೆ ಎಂದು ಹೇಳಿದರು.

ಈ ಜಾಗದ ಸುತ್ತ ಮುಳ್ಳು ತಂತಿ ಹಾಕಿ ಇದರ ಖಾತೆ ಇತ್ಯಾದಿ ದಾಖಲೆಗಳು ದೊರೆತ ನಂತರ ಕೆಲಸ ಆರಂಭಿಸಲಾಗುವುದು ಎಂದರು.

ADVERTISEMENT

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೇಬಲ್ ರಘು ಮಾತನಾಡಿ, ‘30 ವರ್ಷಗಳ ನಿರಂತರ ಹೋರಾಟದ ಫಲವಾಗಿ ನಗರದಲ್ಲಿ ಜಗಜೀವನರಾಮ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಇದಕ್ಕಾಗಿ ಶ್ರಮಿಸಿದ ಜಿಲ್ಲಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರಿಗೆ ಅಭಿನಂದನೆಗಳು’ ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.