ತುಮಕೂರು: ಕ್ರಿಪ್ಟೊ ಕರೆನ್ಸಿ ನೀಡುವುದಾಗಿ ನಂಬಿಸಿ ನಗರದ ಬಾರ್‌ಲೈನ್ ರಸ್ತೆಯ ಆಮಿನಾ ಫಿರ್ದೋಸ್ ಎಂಬುವರಿಗೆ ₹5.43 ಲಕ್ಷ ವಂಚಿಸಲಾಗಿದೆ.
ಮೊದಲಿಗೆ ‘ಕೆಕೆ–194’ ಎಂಬ ವಾಟ್ಸ್ ಆ್ಯಪ್ ಗ್ರೂಪ್‌ಗೆ ಸೇರಿಸಿದ್ದಾರೆ. ಸದರಿ ಗ್ರೂಪ್‌ನಲ್ಲಿ ಕ್ರಿಪ್ಟೊ ಕರೆನ್ಸಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿ, ಕರೆನ್ಸಿ ಖರೀದಿ ಮಾಡಿದರೆ, ಮುಂದಿನ ದಿನಗಳಲ್ಲಿ ನಾವೇ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿ, ದುಪ್ಪಟ್ಟು ಲಾಭ ನೀಡಲಾಗುವುದು ಎಂದು ತಿಳಿಸಿದ್ದಾರೆ. ನಂತರ ಟೆಲಿಗ್ರಾಮ್‌ನಲ್ಲಿ ಸಂಪರ್ಕಿಸಿ ‘Global India’ ಆ್ಯಪ್ ಲಿಂಕ್ ಕಳುಹಿಸಿದ್ದಾರೆ.
ಆಮಿನಾ ಫಿರ್ದೋಸ್ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಅಗತ್ಯ ದಾಖಲೆ ಸಲ್ಲಿಸಿ ಖಾತೆ ತೆರೆದಿದ್ದಾರೆ. ನಂತರ ವಾಟ್ಸ್ ಆ್ಯಪ್‌ನಲ್ಲಿ ತಿಳಿಸಿದ ವಿವಿಧ ಖಾತೆಗಳಿಗೆ ₹5.43 ಲಕ್ಷ ಹಣ ವರ್ಗಾಯಿಸಿದ್ದಾರೆ. ‘Global India’ ಖಾತೆಯಲ್ಲಿ ಕ್ರಿಪ್ಟೊ ಕರೆನ್ಸಿ ಇರುವ ಬಗ್ಗೆ ತೋರಿಸಿದೆ. ವಿತ್‌ಡ್ರಾ ಮಾಡುವಾಗ ಇನ್ನೂ ₹9.20 ಲಕ್ಷ ವರ್ಗಾಯಿಸಿದರೆ ಮಾತ್ರ ಹಣ ವಾಪಸ್ ಪಡೆಯಬಹುದು ಎಂದು ತಿಳಿಸಿದ್ದಾರೆ. ಇದರಿಂದ ಅನುಮಾನ ಬಂದು ಪರಿಶೀಲಿಸಿದಾಗ ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ.
‘ಕ್ರಿಪ್ಟೊ ಕರೆನ್ಸಿ ವ್ಯವಹಾರಕ್ಕೆ ಹಣ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ವಂಚಿಸಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚಿ, ಹೂಡಿಕೆ ಮಾಡಿದ ಹಣ ವಾಪಸ್ ಕೊಡಿಸುವಂತೆ’ ಕೋರಿ ಸೈಬರ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.