ADVERTISEMENT

ಕಾರ ಹುಣ್ಣಿಮೆ ಹಬ್ಬದ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2021, 3:59 IST
Last Updated 1 ಸೆಪ್ಟೆಂಬರ್ 2021, 3:59 IST
ತಿಪಟೂರು ತಾಲ್ಲೂಕು ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಚೌಡೇಶ್ವರಿ ದೇವಾಲಯದಲ್ಲಿ ಚಂದ್ರಶೇಖರನಾಥ ಸ್ವಾಮೀಜಿ ನೇತೃತ್ವದಲ್ಲಿಕಾರ ಹುಣ್ಣಿಮೆ ಹಬ್ಬ ಆಚರಿಸಲಾಯಿತು
ತಿಪಟೂರು ತಾಲ್ಲೂಕು ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಚೌಡೇಶ್ವರಿ ದೇವಾಲಯದಲ್ಲಿ ಚಂದ್ರಶೇಖರನಾಥ ಸ್ವಾಮೀಜಿ ನೇತೃತ್ವದಲ್ಲಿಕಾರ ಹುಣ್ಣಿಮೆ ಹಬ್ಬ ಆಚರಿಸಲಾಯಿತು   

ತಿಪಟೂರು: ತಾಲ್ಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಚೌಡೇಶ್ವರಿ ದೇವಾಲಯದಲ್ಲಿ ಚಂದ್ರಶೇಖರನಾಥ ಸ್ವಾಮೀಜಿ ನೇತೃತ್ವದಲ್ಲಿ ಕಾರ ಹುಣ್ಣಿಮೆ ಹಬ್ಬವನ್ನು ದೇವಾಲಯದ ಆವರಣದಲ್ಲಿ ಆಚರಿಸಲಾಯಿತು.

ಹಬ್ಬದ ಹಿನ್ನೆಲೆ: ರೈತರು ಸಂಭ್ರಮದಿಂದ ಆಚರಿಸುವ ಹಬ್ಬ ಕಾರ ಹುಣ್ಣಿಮೆ. ಬೇಸಿಗೆಯಲ್ಲಿ ಎತ್ತುಗಳಿಂದ ಭೂಮಿಯಲ್ಲಿ ಉಳುಮೆ ಮಾಡುವ ರೈತರು ನಂತರ ಕಾರ ಹುಣ್ಣಿಮೆ ಸಂದರ್ಭದಲ್ಲಿ ಅವುಗಳಿಗೆ ವಿಶ್ರಾಂತಿ ನೀಡುತ್ತಾರೆ. ನಂತರ ಮುಂಗಾರು ಮಳೆಯಾಗುತ್ತಿದ್ದಂತೆ ಮತ್ತೆ ಉಳುಮೆಗೆ ಎತ್ತುಗಳನ್ನು ಕಟ್ಟುತ್ತಾರೆ. ಹೀಗಾಗಿ ಕಾರ ಹುಣ್ಣಿಮೆಯನ್ನು ಪ್ರತಿ ವರ್ಷ ರೈತರು ಸಂಭ್ರಮದಿಂದ ಆಚರಿಸುತ್ತಾರೆ.

ಕಾರ ಹುಣ್ಣಿಮೆಯಂದು ರೈತರು ಎತ್ತುಗಳ ಮೈ ತೊಳೆದು, ಅವುಗಳಿಗೆ ಬಣ್ಣ ಹಚ್ಚುತ್ತಾರೆ. ಅವುಗಳ ಕೊರಳಲ್ಲಿ ಗೆಜ್ಜೆ ಸರ ಸೇರಿದಂತೆ ವಿವಿಧ ಅಲಂಕಾರಿಕ ವಸ್ತುಗಳಿಂದ ಸಿಂಗರಿಸುತ್ತಾರೆ. ಹೋಳಿಗೆ ಸೇರಿದಂತೆ ವಿವಿಧ ರೀತಿ ಸಿಹಿ ಅಡುಗೆ ಮಾಡುತ್ತಾರೆ. ಎತ್ತುಗಳಿಗೆ ಸಿಹಿ ತಿನಿಸುಗಳನ್ನು ತಿನಿಸುತ್ತಾರೆ. ನಂತರ ದೇವಸ್ಥಾನಗಳಿಗೆ ಎತ್ತುಗಳನ್ನು ಕರೆದೊಯ್ದು, ಕರಿ ಹರಿದು, ಎತ್ತುಗಳಿಗೆ ತೊಂದರೆಯಾಗದಂತೆ ದೇವರಲ್ಲಿ ಸ್ಮರಿಸುತ್ತಾರೆ. ಕೆಲವೆಡೆ ಗ್ರಾಮದಲ್ಲಿ ಎತ್ತುಗಳ ಮೆರವಣಿಗೆ ಮಾಡಲಾಗುತ್ತದೆ. ಕೆಲವೆಡೆ ಕೊಬ್ಬರಿ ಹೋರಿ ಓಡಿಸುವ ಸಂಪ್ರದಾಯವಿದೆ.

ADVERTISEMENT

ಕೋವಿಡ್‌ನಿಂದಾಗಿ ಎರಡು ವರ್ಷಗಳಿಂದ ಕಾರ ಹುಣ್ಣಿಮೆ ಸಾಂಕೇತಿಕ ಆಚರಣೆಗಷ್ಟೇ ಸೀಮಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.