ಕೊರಟಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅವರ 74ನೇ ವರ್ಷದ ಜನ್ಮ ದಿನದ ಅಂಗವಾಗಿ ಬ್ಲಾಕ್ ಕಾಂಗ್ರೆಸ್, ಸಚಿವರ ಅಭಿಮಾನಿಗಳ ವತಿಯಿಂದ ತಾಲ್ಲೂಕಿನ ಹೊಳವನಹಳ್ಳಿಯಲ್ಲಿ ಬುಧವಾರ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಹೃದಯ ರೋಗ, ಕಿಡ್ನಿ ಸಮಸ್ಯೆ, ಕಣ್ಣು, ಸ್ತ್ರೀ ರೋಗ ಸೇರಿದಂತೆ ಎಲ್ಲ ರೀತಿಯ ಕಾಯಿಲೆಗಳನ್ನು ತಜ್ಞ ವೈದ್ಯರು ಪರೀಕ್ಷಿಸಿದರು. ಅವಶ್ಯಕತೆ ಇರುವವರಿಗೆ ಸ್ಥಳದಲ್ಲಿಯೇ ಔಷಧಿ ವಿತರಿಸಿದರು. ಹೆಚ್ಚಿನ ಚಿಕಿತ್ಸೆ, ಶಸ್ತ್ರಚಿಕಿತ್ಸೆ ಅಗತ್ಯ ಇದ್ದವರಿಗೆ ಸಿದ್ಧಾರ್ಥ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆಗೆ ಕಳುಹಿಸಿಕೊಟ್ಟರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೆಡಿಕಲ್ ಅಶ್ವತ್ಥ್, ಅರಕೆರೆ ಶಂಕರ್, ಮುಖಂಡರಾದ ಜಯಮ್ಮ, ಬೈರೇಶ್, ಎಚ್.ಕೆ.ಮಹಾಲಿಂಗಪ್ಪ, ಮಾವತ್ತೂರು ವೆಂಕಟಪ್ಪ, ಟಿ.ಸಿ.ರಾಮಯ್ಯ, ಗೋವಿಂದರಾಜು, ವೆಂಕಟಪ್ಪ, ಕವಿತಾ, ಮೈಲಾರಪ್ಪ, ಹೊಳವನಹಳ್ಳಿ ಜಯರಾಮು, ಉಮೇಶ್ ಇತರರು ಪಾಲ್ಗೊಂಡಿದ್ದರು.
ಪೂಜೆ: ಪಟ್ಟಣ ಪಂಚಾಯಿತಿ ಮುಂಭಾಗ ಅನ್ನ ಸಂತರ್ಪಣೆ, ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ, ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಣೆ ಸೇರಿದಂತೆ ಹಲವು ಸಾಮಾಜಿಕ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.